| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021
ತುಮಕೂರು – ಶಿವಮೊಗ್ಗ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ 6397.47 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಕೇಂದ್ರ ಭೂ ಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರು ಅನುಮೋದನೆ ನೀಡಿರುವುದರಿಂದ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಈ ಯೋಜನೆಯಿಂದಾಗಿ ತುಮಕೂರು – ಶಿವಮೊಗ್ಗ ನಡುವೆ 5 ದೊಡ್ಡ ಸೇತುವೆಗಳು, 66 ರೈಲ್ವೆ ಕೆಳಸೇತುವೆ, ಮೇಲ್ಸೇತುವೆಗಳು, 7 ಕಡೆ ಬೈಪಾಸ್‌ಗಳು ನಿರ್ಮಾಣವಾಗಲಿದೆ. ಬೆಂಗಳೂರಿನಿಂದ ಮಲೆನಾಡು ಭಾಗದ ಸಂಪರ್ಕ ಇನ್ನಷ್ಟು ಸುಗಮವಾಗುವುದರ ಜೊತೆಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಕ್ಕೆ ಸಹಕಾರಿಯಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.
ಹೆಚ್ಚುವರಿ ಅನುದಾನ ಮಂಜೂರು
ಇತ್ತೀಚೆಗೆ ಕೇಂದ್ರ ಸಚಿವರನ್ನು ಭೇಟಿಯಾಗಿ ಯೋಜನೆಗೆ ಈಗಾಗಲೇ ನೀಡಲಾಗಿರುವ ಅನುದಾನದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ, ಭೂಸ್ವಾಧಿನ ಹಾಗೂ ಇತರ ವೆಚ್ಚಗಳಿಗಾಗಿ ಹೆಚ್ಚುವರಿಯಾಗಿ 1,796.24 ಕೋಟಿ ರೂ. ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ಭಾರತಮಾಲಾ ಯೋಜನೆಯಡಿ ಒಟ್ಟಾರೆ ಯೋಜನೆ ಅನುಷ್ಟಾನಕ್ಕೆ 6,397.47 ಕೋಟಿ ರೂ. ಮಂಜೂರು ಮಾಡಿರುವುದಕ್ಕೆ ಸಂಸದರು ಅಭಿನಂದನೆ ಸಲ್ಲಿಸಿದ್ದಾರೆ.
ಒಟ್ಟು ನಾಲ್ಕು ಪ್ಯಾಕೇಜ್‌ಗಳು
ಒಟ್ಟು ನಾಲ್ಕು ಪ್ಯಾಕೇಜ್‌ಗಳಲ್ಲಿ ಕಾಮಗಾರಿ ಅನುಷ್ಟಾನಗೊಳಿಸಲಾಗುತ್ತಿದ್ದು, ಬೆಟ್ಟದಹಳ್ಳಿ (ತರೀಕೆರೆ)ಯಿಂದ ಶ್ರೀರಾಂಪುರ (ಶಿವಮೊಗ್ಗ) ಪ್ಯಾಕೇಜಿನಲ್ಲಿ 56.335 ಕಿಮಿ ಅಭಿವೃದ್ಧಿಪಡಿಸಲಾಗುತ್ತಿದೆ.
ಇದರೊಂದಿಗೆ 33ಕಿಮಿ ಸರ್ವಿಸ್ ರಸ್ತೆ, ತುಂಗಾ ಮತ್ತು ಭದ್ರಾ ನದಿಗೆ 3 ಬೃಹತ್ ಸೇತುವೆಗಳು, 20 ಅಂಡರ್ ಮತ್ತು ಓವರ್ ಪಾಸ್‌ಗಳು, ಶಿವಮೊಗ್ಗದಲ್ಲಿ 14.74 ಕಿಮಿ ಹಾಗೂ ತರೀಕೆರೆಯಲ್ಲಿ 9 ಕಿಮಿ ಬೈಪಾಸ್, ರಂಗಾಪುರ ಗ್ರಾಮದಲ್ಲಿ ಟೋಲ್ ಪ್ಲಾಜಾ ನಿರ್ಮಾಣವಾಗಲಿದೆ.
ಈ ಪ್ಯಾಕೇಜಿಗೆ ಈ ಮೊದಲು 1331.77 ಕೋಟಿ ರೂ. ಅಂದಾಜಿಸಲಾಗಿದ್ದು, ಇದೀಗ ಪರಿಷ್ಕೃತ ಅಂದಾಜಿನಲ್ಲಿ 2082.98 ಕೋಟಿ ರೂ. ಅಂದಾಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()