ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JUNE 2024
SHIMOGA : ಸವಳಂಗ ರಸ್ತೆ ಮೇಲ್ಸೇತುವೆಯ (Bridge) ಸರ್ವಿಸ್ ರಸ್ತೆ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಮತ್ತು ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಪರಿಶೀಲಿಸಿದರು. ಮೇಲ್ಸೇತುವೆ ಕಾಮಗಾರಿ ಹಾಗೂ ಸರ್ವಿಸ್ ರಸ್ತೆಯಲ್ಲಿನ ಕಾಮಗಾರಿಗಳಲ್ಲಿ ಕೆಲ ಲೋಪಗಳಿವೆ ಎಂದು ನಿವಾಸಿಗಳಿಂದ ದೂರು ಬಂದ ಹಿನ್ನೆಲೆ ಪರಿಶೀಲಿಸಿದರು.
ಮಳೆ ನೀರು ಸರಾಗವಾಗಿ ಹೋಗಲು ಸರ್ವಿಸ್ ರಸ್ತೆಯ ಎರಡು ಬದಿ ಮತ್ತು ಮೇಲ್ಸೇತುವೆಯಿಂದ ಕೆಳಗೆ ಬೀಳುವ ಮಳೆ ನೀರನ್ನು ತಡೆದು ಇಂಗಿಸಲು, ಅಂಡರ್‌ಪಾಸ್‌ನಲ್ಲಿನ ಸಣ್ಣಪುಟ್ಟ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿರು. ಇನ್ನು, ಉಷಾ ನರ್ಸಿಂಗ್ ಹೋಂ ಸರ್ಕಲ್‌ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಕುರಿತು ಚರ್ಚಿಸಿದರು.
ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ರೈಲ್ವೆ ಮುಖ್ಯ ಎಂಜಿನಿಯರ್ ಪ್ರದೀಪ್ ಪುರಿ, ಮೂರ್ತಿರಾಜ್, ಹರ್ಷವರ್ಧನ್, ರಾಜ್‌ಕುಮಾರ್, ಸಿದ್ದಪ್ಪ, ಪಾಲಿಕೆ ಆಯುಕ್ತೆ ಡಾ. ಕವಿತಾ ಯೋಗಪ್ಪನವರ, ಸ್ಮಾರ್ಟ್ ಸಿಟಿ ಇಂಜಿನಿಯರ್ ವಿಜಯ್‌ಕುಮಾರ್ ಇದ್ದರು.
ಇದನ್ನೂ ಓದಿ – ತಹಶೀಲ್ದಾರ್ ಕೊಠಡಿ ಬಾಗಿಲಲ್ಲಿ ಕುಳಿತು ಶಾಸಕ ಆರಗ ಜ್ಞಾನೇಂದ್ರ ಪ್ರತಿಭಟನೆ, ಕಾರಣವೇನು?
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





