‘ಶಿವಮೊಗ್ಗದಲ್ಲಿ ರಾಘವೇಂದ್ರ 2.5 ಲಕ್ಷ ಮತಗಳ ಅಂತರದಿಂದ ಗೆಲ್ತಾರೆʼ

SHIVAMOGGA LIVE NEWS | 1 MAY 2024 (ಈ ಸುದ್ದಿಯನ್ನು ಇನ್ನು 72 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ELECTION NEWS : ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರು 2.5 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಮಾಧ್ಯಮಗಳ ಜೊತೆಗೆ ಮಾತನಾಡಿದ ಯಡಿಯೂರಪ್ಪ, ಶಿವಮೊಗ್ಗದಲ್ಲಿ ದೇವದುರ್ಲಭ ವಾತಾವರಣ ಇದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ದೇವೇಗೌಡ ಅವರ ಬಗ್ಗೆ ಜನರಿಗೆ ಅಭಿಮಾನವಿದೆ. ಇದು ಬಿಜೆಪಿಯ ಗೆಲುವಿಗೆ ಅನುಕೂಲ ಆಗಲಿದೆ. ನಾಳೆಯಿಂದ ಪುನಃ ಪ್ರವಾಸ ಕೈಗೊಳ್ಳುತ್ತೇನೆ. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ವಾತಾವರಣ ಚೆನ್ನಾಗಿದೆ ಎಂದು ತಿಳಿಸಿದರು.

ಆಡಿಯೋ ವಿಡಿಯೋ ಪ್ರಚಾರ ಆರಂಭ

BJP Audio Video

SHIMOGA : ಲೋಕಸಭೆ ಚುನಾವಣಗೆ ಬಿಜೆಪಿ ವತಿಯಿಂದ ಆಡಿಯೋ, ವಿಡಿಯೋ ಪ್ರಚಾರ ಆರಂಭಿಸಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಬಿಜೆಪಿ ಕಚೇರಿಯಲ್ಲಿ ಆಡಿಯೋ, ವಿಡಿಯೋ ಪ್ರಚಾರಕ್ಕೆ ಚಾಲನೆ ನೀಡಿದರು. ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌, ಪ್ರಮುಖರಾದ ಗಿರೀಶ್‌ ಪಟೇಲ್‌, ಆರ್‌.ಕೆ.ಸಿದ್ದರಾಮಣ್ಣ, ಎನ್.ಡಿ.ಸತೀಶ್‌, ಕೆ.ವಿ.ಅಣ್ಣಪ್ಪ, ಶರತ್‌ ಕಲ್ಯಾಣಿ, ದಿನೇಶ್‌ ಆಚಾರ್ಯ ಇದ್ದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ

ಹೊಸಮನೆಯಲ್ಲಿ ರೋಡ್‌ ಶೋ

raghvendra campaign

SHIMOGA : ಹೊಸಮನೆ ಬಡಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ರೋಡ್‌ ಶೋ ನಡೆಸಿದರು. ಶಾಸಕ ಎಸ್‌.ಎನ್.ಚನ್ನಬಸಪ್ಪ ಸೇರಿದಂತೆ ಬಿಜೆಪಿ ಪ್ರಮುಖರು ಭಾಗವಹಿಸಿದ್ದರು. ಇದೇ ವೇಳೆ ಮಾತನಾಡಿದ ಬಿ.ವೈ.ರಾಘವೇಂದ್ರ, ಕೇಂದ್ರ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಯೋಜನೆಗಳು, ತಮ್ಮ ಅವಧಿಯಲ್ಲಿ ಶಿವಮೊಗ್ಗದಲ್ಲಿ ಆದ ಅಭಿವೃದ್ಧಿ ಕಾರ್ಯಗಳ ಕುರಿತು ತಿಳಿಸಿದರು. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ಓದಿ – ‘ಈ ಬಾರಿಯೂ ಅವರು ಮನೆ ಖಾಲಿ ಮಾಡೋದು ಗ್ಯಾರಂಟಿʼ, ಗೀತಾ, ಮಧು ವಿರುದ್ಧ ಕುಮಾರ್‌ ಕಿಡಿ, ಇಲ್ಲಿದೆ 5 ಪ್ರಮುಖಾಂಶ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

BS-Yedyurappa-and-BY-Raghavendra-in-Shimoga

Leave a Comment