ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆದ ಹಿನ್ನೆಲೆ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕ್ಯಾಂಡಲ್ ಲೈಟ್ ಜಾಥಾ ನಡೆಸಲಾಯಿತು.
ಶಿವಪ್ಪನಾಯಕ ಪ್ರತಿಮೆ ಬಳಿಯಿಂದ ಗೋಪಿ ಸರ್ಕಲ್’ವರೆಗೆ ಜಾಥಾ ನಡೆಸಲಾಯಿತು. ಗೋಪಿ ಸರ್ಕಲ್’ನಲ್ಲಿ ಬಹಿರಂಗ ಸಭೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ರೈತ ಗೀತೆ ಹಾಡಿ ಹೋರಾಟದಲ್ಲಿ ಮಡಿದ ರೈತರಿಗೆ ನಮನ ಸಲ್ಲಿಸಿದರು.
ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಪೊರೇಟ್ ಕಂಪನಿಗಳ ಪರವಾಗಿ ಕಾಯ್ದೆಗಳನ್ನು ರೂಪಿಸುತ್ತಿದ್ದಾರೆ. ಕೃಷಿ ಕಾಯ್ದೆಗಳು ರೈತರ ಬದುಕಿಗೆ ಕೊಡಲಿ ಪೆಟ್ಟು ನೀಡಲು ಹೊರಟಿದ್ದರು. ನಿರಂತರ ಹೋರಾಟ ಮಾಡಿದ ರೈತರಿಗೆ ಕಾಂಗ್ರೆಸ್ ಬೆಂಬಲವಾಗಿ ನಿಂತಿತ್ತು. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹೋರಾಟದಲ್ಲಿ ಪಾಲ್ಗೊಂಡಿದ್ದರು ಎಂದರು.
ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪ್ರಮುಖರು, ಕಾರ್ಯಕರ್ತರು ಕ್ಯಾಂಡಲ್ ಲೈಟ್ ಜಾಥಾದಲ್ಲಿ ಪಾಲ್ಗೊಂಡಿದ್ದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






