ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 APRIL 2023
SHIMOGA : ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾನ (Voting) ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿಯಿಂದ ಬುಧವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಿಂದ ಶಿವಪ್ಪನಾಯಕನ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ನಡೆಯಿತು.
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆ ಗ್ರಾಮಾಂತರ ಭಾಗಕ್ಕಿಂತ ನಗರ ಭಾಗದಲ್ಲಿ ಮತದಾನ (Voting) ಪ್ರಕ್ರಿಯೆ ಕಡಿಮೆ ಆಗಿದೆ. ಆದ್ದರಿಂದ ನಗರ ಭಾಗದ ಮತದಾರರು ಜಾಗೃತರಾಗಬೇಕು. ಜೊತೆಗೆ ಸಾರ್ವಜನಿಕರು ಮರೆಯದೆ ಮೇ 10ರಂದು ಹತ್ತಿರದ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕುವೆಂದು ಜಿಲ್ಲಾ ಪಂಚಾಯತಿ ಸಿಇಒ ಸ್ನೆಹಲ್ ಲೋಖಂಡೆ ಸುಧಾಕರ್ ಕೋರಿದರು.
ಮತದಾನ ಮಾಡುವುದು ಪ್ರಜಾಪ್ರಭುತ್ವದ ಹಬ್ಬ. ಜನರು ಮತದಾನ ಮಾಡಿ, ತಮ್ಮ ಹಕ್ಕನ್ನು ಚಲಾಯಿಸಬೇಕು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ಕಡಿಮೆ ಆದ ಮತಕಟ್ಟೆಗಳಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಆ ಪ್ರದೇಶದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ವತಿಯಿಂದ ಹೊನಲು ಬೆಳಕಿನ ಕಬಡಿ ಪಂದ್ಯಾವಳಿ, ವಾಲಿಬಾಲ್ ಪಂದ್ಯಾವಳಿ, ಫುಟ್ಬಾಲ್ ಟೂರ್ನಿ, ಅಣುಕು ಮತದಾನ ಬೂತ್ ಗಳನ್ನು ರಚಿಸಿ, ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಹೇಳಿದರು.
ಇದನ್ನೂ ಓದಿ – ಚುನಾವಣೆ ಹೊತ್ತಲ್ಲಿ ಎಷ್ಟು ಹಣ ಕೊಂಡೊಯ್ಯಬಹುದು? ಮದುವೆ ಮಾಡಲು ಬೇಕಾ ಅನುಮತಿ?
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸಿಬ್ಬಂದಿ ವರ್ಗ, ಮಹಾನಗರ ಪಾಲಿಕೆ ಸಿಬ್ಬಂದಿ ವರ್ಗ, ಜೆಸಿಐ ಸದಸ್ಯರು ಭಾಗವಹಿಸಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422