ಗೋಪಿ ಸರ್ಕಲ್​ನಲ್ಲಿ ಮೇಣದ ಬತ್ತಿ ಹಿಡಿದು ಸಾರಿಗೆ ನೌಕರರ ಪ್ರತಿಭಟನೆ, ಗೂಢಚರ್ಯೆಗೆ ಆಕ್ರೋಶ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021

ಆರನೆ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಕೆಎಸ್​ಆರ್​ಟಿಸಿ ನೌಕರರು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

Covid 19 Vaccination Kan poster 1 1

ಶಿವಮೊಗ್ಗದ ಗೋಪಿ ಸರ್ಕಲ್​ನಲ್ಲಿ ಮೇಣದ ಬತ್ತಿ ಹಿಡಿದು ನೌಕರರು ಪ್ರತಿಭಟನೆ ನಡೆಸಿದರು. ತಮ್ಮ ಹಕ್ಕೊತ್ತಾಯಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.

ಗೂಢಚರ್ಯೆಗೆ ಆರೋಪ, ಆಕ್ರೋಶ

ಕೆಎಸ್​ಆರ್​ಟಿಸಿಯ ಸಿಬ್ಬಂದಿಯೊಬ್ಬರು ತಮ್ಮ ಪ್ರತಿಭಟನೆಯ ಗೂಢಚರ್ಯೆ ಮಾಡುತ್ತಿದ್ದಾರೆ. ಪ್ರತಿಭಟನಾನಿರತ ನೌಕರರ ಮಾತುಗಳನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿ, ಹಿರಿಯ ಅಧಿಕಾರಿಗಳಿಗೆ ಕಳುಹಿಸುತ್ತಿದ್ದಾರೆ. ಇವರಿಂದಾಗಿ ಹಲವು ನೌಕರರ ವರ್ಗಾವಣೆಯಾಗುತ್ತಿದೆ. ಗೂಢಚರ್ಯೆ ಮಾಡುವ ಅಗತ್ಯವೇನು ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದರು.

ವಕೀಲ ಕೆ.ಪಿ.ಶ್ರೀಪಾಲ್, ದಲಿತ ಸಂಘರ್ಷ ಸಮಿತಿ ಮುಖಂಡ ಗುರುಮೂರ್ತಿ, ಬಂಜಾರ ವಿದ್ಯಾರ್ಥಿ ಸಂಘಟನೆ ಮುಖಂಡ ಗಿರೀಶ್, ಕೆಎಸ್​ಆರ್​ಟಿಸಿ ನೌಕರರ ಸಂಘದ ಸಂತೋಷ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಪ್ರತಿಭಟನೆಯ ವಿಡಿಯೋ ರಿಪೋರ್ಟ್


ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment