ಬೀಗರ ಊಟದ ವೇಳೆ ಅಧಿಕಾರಿಗಳ ದಾಳಿ, ಮದುವೆ ಮಾಡಿಸಿದ ಹಲವರ ವಿರುದ್ಧ ಕೇಸ್, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಅಪ್ರಾಪ್ತ ಬಾಲಕಿಯ ವಿವಾಹ (CHILD MARRIAGE) ಮಾಡಿಸಿದ ಸಂಬಂಧ ಶಿವಮೊಗ್ಗದಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಬಾಲಕಿಯನ್ನು ಅಧಿಕಾರಿಗಳು ಮಾಡಿ, ಬಾಲ ಮಂದಿರದಲ್ಲಿ ಆಶ್ರಯ ನೀಡಿದ್ದಾರೆ.

Shimoga Nanjappa Hospital

ಶಿವಮೊಗ್ಗ ತಾಲೂಕು ಸಂತೆ ಕಡೂರು ಗ್ರಾಮದ ದೇವಸ್ಥಾನದಲ್ಲಿ ಅಪ್ರಾಪ್ತೆಯ ವಿವಾಹ ನಡೆದಿತ್ತು. ಮದುವೆ ನಂತರ ಬೀಗರ ಊಟ ಆಯೋಜಿಸಲಾಗಿತ್ತು. ಈ ವೇಳೆ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದ್ದು, ದಾಳಿ ನಡೆಸಿದ್ದಾರೆ.

ಬಾಲಕಿಯ ರಕ್ಷಣೆ

ಎರಡು ವರ್ಷದ ಹಿಂದೆ ಅಪ್ರಾಪ್ತೆಗೆ ದೂರದ ಸಂಬಂಧಿ ಯುವಕನ ಪರಿಚಯವಾಗಿತ್ತು. ಇಬ್ಬರು ಫೋನ್ ಮೂಲಕ ಸಂಪರ್ಕದಲ್ಲಿದ್ದರು. ಕೊನೆಗೆ ಕುಟುಂಬದವರು ಸೇರಿ ನಿಶ್ಚಯಿಸಿ ಮದುವೆ ಮಾಡಿದ್ದರು. ಮದುವೆಯಾದ ಮರುದಿನ ಬೀಗರ ಊಟ ಆಯೋಜಿಸಲಾಗಿತ್ತು.

ಅಧಿಕಾರಿಗಳಿಂದ ದಾಳಿ

ಅಪ್ರಾಪ್ತೆಯ ವಿವಾಹ ವಿಚಾರ ತಿಳಿದು ಅಧಿಕಾರಿಗಳು ದಾಳಿ ನಡೆಸಿ, ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ. ಇನ್ನು, ಬಾಲಕಿಯ ಪೋಷಕರು, ಮದುಮಗ, ಆತನ ಪೋಷಕರು, ಮದುವೆ ಮಾಡಿಸಿದವರ ಮೇಲೆ ಕೇಸ್ ಹಾಕಲಾಗಿದೆ.

ಯಾರೆಲ್ಲೆರ ಮೇಲೆ ಕೇಸ್?

ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿ ಅಪ್ರಾಪ್ತೆಯ ವಿವಾಹ (CHILD MARRIAGE) ಮಾಡಿಸಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಮದುಮಗ, ಬಾಲಕಿಯ ಪೋಷಕರು, ಮದುಮಗನ ಚಿಕ್ಕಪ್ಪ, ಚಿಕ್ಕಮ್ಮ, ಮದುವೆಗೆ ಜಾಗ ನೀಡಿದ ದೇವಸ್ಥಾನದ ಆಡಳಿತ ಮಂಡಳಿ, ಅರ್ಚಕರು, ಇಬ್ಬರು ಫೋಟೊ ಗ್ರಾಫರ್’ಗಳು, ಅಡುಗೆ ಭಟ್ಟರು, ಆಮಂತ್ರಣ ಪತ್ರಿಕೆ ಮುದ್ರಿಸಿದವರು, ಮದುವೆಗೆ ಹಾಜರಾದ ಸ್ನೇಹಿತರು, ಸಂಬಂಧಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

ಇದನ್ನೂ ಓದಿ – ಕರ್ನಾಟಕ ರತ್ನ ಪುರಸ್ಕೃತ ಖೋ ಖೋ ಆಟಗಾರ ನಿಧನ, ತೀರ್ಥಹಳ್ಳಿಯಲ್ಲಿ ಅಂತ್ಯ ಸಂಸ್ಕಾರ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 9, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment