ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 16 FEBRURARY 2023
SHIMOGA : ದರೋಡೆಗೆ ಹೊಂಚು (dacoity plan) ಹಾಕಿದ್ದ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಈ ಕುರಿತು ಲಾಡ್ಜ್ ಒಂದರಲ್ಲಿ ಸಂಚು ರೂಪಿಸಿರುವುದು ಬೆಳಕಿಗೆ ಬಂದಿದೆ.

ಭದ್ರಾವತಿಯ ಇಬ್ಬರು, ಶಿವಮೊಗ್ಗದ ಮೂವರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ – ಗಾಜನೂರು ರಸ್ತೆಯಲ್ಲಿ ರಾತ್ರಿ ವೇಳೆ ವಾಹನಗಳನ್ನು ಅಡ್ಡಗಟ್ಟಿ, ಮಾರಕಾಸ್ತ್ರ ತೋರಿಸಿ ಹಣ, ಚಿನ್ನಾಭರಣ, ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡಲು ಈ ಯುವಕರು ಸಂಚು ರೂಪಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದ ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ದರೋಡೆ
ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ ಬಳಿ ಇರುವ ಲಾಡ್ಜ್ ಒಂದರಲ್ಲಿ ಇವರು ಸಂಚು (dacoity plan) ರೂಪಿಸಿರುವುದು ಗೊತ್ತಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ – ಬಾಕ್ಸ್ ತುಂಬಾ ದುಡ್ಡಿದೆ ಅಂತಾ ಕೊಟ್ಟರು, ಎಣಿಸಲು ತೆಗೆದಾಗ ಕಾದಿತ್ತು ಶಾಕ್, ಇಂತವರ ಬಗ್ಗೆ ಹುಷಾರ್


CLICK HERE TO JOIN SHIVAMOGGA LIVE WHATSAPP GROUP