ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಡಿತರ ವಿತರಣೆಗೆ ಜಿಲ್ಲಾಡಳಿತ ಟೈಮ್ ಫಿಕ್ಸ್ ಮಾಡಿದೆ. ಮೇ ಮೊದಲ ವಾರದಲ್ಲಿ ಪಡಿತರ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಪಡಿತರ ಅಕ್ಕಿ ಮತ್ತು ತೊಗರಿ ಬೇಳೆ ವಿತರಣೆ ಆರಂಭಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪಾಸ್ ದುರುಪಯೋಗವಾದರೆ ಕ್ರಮ
ವಿವಿಧ ಸೇವೆಗಳಿಗಾಗಿ ಜಿಲ್ಲಾಡಳಿತ ಪಾಸ್ ವಿತರಣೆ ಮಾಡಿದೆ. ಆದರೆ ಈ ಪಾಸ್ ದುರುಪಯೋಗ ಪಡಿಸಿರುವುದು ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಕಡ್ಡಾಯ ಮಾಹಿತಿ ಒದಗಿಸಬೇಕು
ಜಿಲ್ಲೆಯ ಪ್ರತಿ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‍ಗಳಲ್ಲಿ ಜ್ವರ, ಉಸಿರಾಟ ತೊಂದರೆ, ಗಂಟಲು ನೋವು ಇತ್ಯಾದಿ ರೋಗಗಳ ಚಿಕಿತ್ಸೆಗಾಗಿ ಬರುವವರ ಮಾಹಿತಿಯನ್ನು ಪ್ರತಿ ದಿನ ಗೂಗಲ್ ಸ್ಟ್ರೆಡ್ ಶೀಟ್‍ನಲ್ಲಿ ಒದಗಿಸುವಂತೆ ಈಗಾಗಲೆ ಸೂಚನೆ ನೀಡಲಾಗಿದೆ. ಈ ಕುರಿತು ಪರಿಶೀಲಿಸಲು ತಾಲೂಕು ಮಟ್ಟದಲ್ಲಿ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಪ್ರತಿ ದಿನ ತಪಾಸಣೆ ನಡೆಸಲಾಗುತ್ತಿದೆ. ಮಾಹಿತಿಯನ್ನು ಒದಗಿಸದಿರುವ ಪ್ರಕರಣಗಳಲ್ಲಿ ಅಂತಹ ವೈದ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]