ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜನವರಿ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನೈಟ್ ಕರ್ಫ್ಯೂ ಅದೇಶ ಉಲ್ಲಂಘಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಶಶಿಕುಮಾರ್ (26) ಎಂಬಾತನ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ಕಾಯಿಲೆ ಕಾಯ್ದೆ ಅಡಿ ಕೇಸ್ ದಾಖಲು ಮಾಡಲಾಗಿದೆ.
ಏನಿದು ಪ್ರಕರಣ?
ನೈಟ್ ಕರ್ಫ್ಯೂ ಹಿನ್ನೆಲೆ, ಪೊಲೀಸರು, ರಾತ್ರಿ 10 ಗಂಟೆ ಬಳಿಕ ಶಿವಮೊಗ್ಗದ ಸವಳಂಗ ರಸ್ತೆಯ ಫುಡ್ ಕೋರ್ಟ್ ಬಂದ್ ಮಾಡಿಸುತ್ತಿದ್ದರು. ಈ ಸಂದರ್ಭ ಫುಡ್ ಕೋರ್ಟ್’ನಲ್ಲಿದ್ದ ಶಶಿಕುಮಾರ್, ತಾನು ಊಟ ಮಾಡಬೇಕಿದ್ದು, ಹೊಟೇಲ್’ಗಳನ್ನು ಯಾಕೆ ಬಂದ್ ಮಾಡಿಸುತ್ತಿದ್ದೀರ ಎಂದು ಪ್ರಶ್ನಿಸಿದ್ದಾನೆ. ಅಲ್ಲದೆ ಇಬ್ಬರು ಕಾನ್ಸ್’ಟೇಬಲ್’ಗಳ ಮೇಲೆ ಹಲ್ಲೆ ಮಾಡಿ, ಯುನಿಫಾರಂ ಹರಿದಿದ್ದಾನೆ ಎಂದು ಆರೋಪಿಸಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪಿಎಸ್ಐ ಸತೀಶ್ ನಾಯ್ಕ್ ಅವರು, ಶಶಿಕುಮಾರನನ್ನು ವಶಕ್ಕೆ ಪಡೆದಿದ್ದಾರೆ. ಆತನ ವಿರುದ್ದ ಕರ್ನಾಟಕ ಸಾಂಕ್ರಾಮಿಕ ಕಾಯಿಲೆ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿದ್ದಾರೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






