ಮಹಿಳೆಯರೆ ಹುಷಾರ್, WORK FROM HOME ಹೆಸರಲ್ಲಿ ನಡೆಯುತ್ತಿದೆ ವಂಚನೆ, ಶಿವಮೊಗ್ಗದಲ್ಲಿ ಕೇಸ್

SHIVAMOGGA LIVE NEWS | SHIMOGA | 22 ಜೂನ್ 2022➤ ಸುದ್ದಿಯ ಮುಂದಿನ 11 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ವರ್ಕ್ ಫ್ರಮ್ ಹೋಮ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಮಹಿಳೆಯೊಬ್ಬರಿಗೆ ವಂಚನೆ ಮಾಡಲಾಗಿದೆ. ಮನೆಯಲ್ಲೆ ಕುಳಿತು ಹಣ ಸಂಪಾದಿಸುವ ಕನಸು ಹೊತ್ತಿದ್ದ ಮಹಿಳೆ, ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

Shimoga Nanjappa Hospital

ವಿನೋಬನಗರ 100 ಅಡಿ ರಸ್ತೆಯ ನಿವಾಸಿ ಮಹಿಳೆಯೊಬ್ಬರು ವಂಚನೆಗೊಳಗಾಗಿದ್ದಾರೆ. ಗೂಗಲ್’ನಲ್ಲಿ ಸರ್ಚ್ ಮಾಡಿದಾಗ ಲಿಂಕ್ ಪತ್ತೆಯಾಗಿದೆ. ಅದನ್ನು ಕ್ಲಿಕ್ ಮಾಡಿ ಮಹಿಳೆ ಸಮಸ್ಯೆಗೆ ಸಿಲುಕಿದ್ದಾರೆ.

ಏನಿದು ಪ್ರಕರಣ?

ಮನೆಯಿಂದಲೆ ಕೆಲಸ ಮಾಡುವ ಇಂಗಿತದೊಂದಿಗೆ ಮಹಿಳೆಯೊಬ್ಬರು ಗೂಗಲ್’ನಲ್ಲಿ ಸರ್ಚ್ ಮಾಡಿದ್ದಾರೆ. ಅಲ್ಲಿ EARN MONEY WRITE NOW ಎಂಬ ಪೇಜ್ ಲಿಂಕ್ ಕ್ಲಿಕ್ ಮಾಡಿದ್ದಾರೆ. ಮೊಬೈಲ್ ನಂಬರ್ ರಿಜಿಸ್ಟರ್ ಮಾಡುತ್ತಿದ್ದಂತೆ ಮೆಸೇಜ್ ಮೂಲಕ ಲಿಂಕ್ ಬಂದಿದೆ.

ಲಿಂಕ್ ಕ್ಲಿಕ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳುವಂತೆ ತಿಳಿಸಲಾಗಿತ್ತು. ಅದರಂತೆ ಮಹಿಳೆ ಎಲ್ಲಾ ವಿವರಗಳನ್ನು ಒದಗಿಸಿದ್ದಾರೆ. ಬ್ಯಾಂಕ್ ಖಾತೆಯ ಮಾಹಿತಿಯನ್ನು ಕೊಟ್ಟಿದ್ದಾರೆ. ಆ ಬಳಿಕ ಕೆಲವು ಟಾಸ್ಕ್ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಇದೆ ಸಂದರ್ಭ ಹಣ ವರ್ಗಾವಣೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ಮಹಿಳೆ ಹಲವು ಭಾರಿ ಹಣ ವರ್ಗಾವಣೆ ಮಾಡಿದ್ದಾರೆ.

ಒಟ್ಟು 1.35 ಲಕ್ಷ ರೂ. ಹಣವನ್ನು ಮಹಿಳೆ ವರ್ಗಾಯಿಸಿದ್ದಾರೆ. ಆದರೆ ಸಂಸ್ಥೆಯಿಂದ ಯಾವುದೆ ಪ್ರತಿಕ್ರಿಯೆ ಬಾರದಿದ್ದಾಗ ಮಹಿಳೆ ತಾನು ವಂಚನೆಗೊಳಗಾಗಿದ್ದೇನೆ ಎಂಬುದು ಅರಿವಾಗಿದೆ.

ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ತನಿಖೆ ಮುಂದುವರೆದಿದೆ.

ಇದನ್ನೂ ಓದಿ – ತಕ್ಷಣಕ್ಕೆ ಸಾಲ ಕೊಡ್ತಾರೆ, ಆಮೇಲೆ ಪ್ರಾಣವನ್ನೇ ತೆಗೆದುಬಿಡ್ತಾರೆ, ಬಡ, ಮಧ್ಯಮ ವರ್ಗದವರೆ ಇವರ ಟಾರ್ಗೆಟ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment