ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟವನ ವಿರುದ್ಧ ಶಿವಮೊಗ್ಗದಲ್ಲಿ ಕೇಸ್, ಏನಿದು ಪ್ರಕರಣ? ಯಾರು ಈತ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE | 2 JUNE 2023

SHIMOGA : ಮಂಗಳೂರು ವಿಮಾನ ನಿಲ್ದಾಣಕ್ಕೆ (Airport) ಬಾಂಬ್‌ ಇಟ್ಟ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಆದಿತ್ಯ ರಾವ್‌ ವಿರುದ್ಧ ಶಿವಮೊಗ್ಗದ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಉಂಟು ಮಾಡಿದ ಆರೋಪದ ಹಿನ್ನೆಲೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ಚೀಫ್‌ ಸೂಪರಿಂಟೆಂಡೆಂಟ್‌ ಅವರು ದೂರು ನೀಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Mangalore-Airport-Bomb-Planter-Aditya-Rao-in-Shimoga-jail

ಏನಿದು ಪ್ರಕರಣ?

ಶಿವಮೊಗ್ಗ ಕೇಂದ್ರ ಕಾರಾಗೃಹದ ಶಿಕ್ಷಾ ಬಂಧಿ ಆದಿತ್ಯ ರಾವ್‌ ಮೇ 31ರಂದು ಮಧ್ಯಾಹ್ನ ಜೈಲಿನ ವಿಡಿಯೋ ಕಾನ್ಫರೆನ್ಸ್‌ ಕೊಠಡಿ ಬಳಿ ಬಂದಿದ್ದ. ಇವತ್ತು ತನ್ನ ವಿಚಾರಣೆ ಇದೆಯೇ ಎಂದು ಪ್ರಶ್ನಿಸಿದ್ದ. ಅಲ್ಲಿದ್ದ ಸಿಬ್ಬಂದಿ ದಾಖಲೆಗಳನ್ನು ಪರಿಶೀಲಿಸಿ ಇಲ್ಲ ಎಂದು ತಿಳಿಸಿದ್ದರು. ಸ್ವಲ್ಪ ದೂರ ಹೋಗಿದ್ದ ಆದಿತ್ಯ ಹಿಂತಿರುಗಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮೊಬೈಲ್‌ ಮಾಯ, ಸ್ವಲ್ಪ ಹೊತ್ತಿನಲ್ಲೇ ಕಾದಿತ್ತು ಮತ್ತೊಂದು ಶಾಕ್

ವಿ.ಸಿ.ಕೊಠಡಿಯಲ್ಲಿದ್ದ ಟಿವಿಯೊಂದಕ್ಕೆ ಕಲ್ಲಿನಿಂದ ಹೊಡೆದು ಹಾನಿ ಮಾಡಿದ್ದಾನೆ. ಅಷ್ಟರಲ್ಲಿ ಕೊಠಡಿಯಲ್ಲಿದ್ದ ಸಿಬ್ಬಂದಿ ಆದಿತ್ಯನನ್ನು ಹಿಡಿದಿದ್ದರು. ಆದರೆ ಅವರಿಂದ ತಪ್ಪಿಸಿಕೊಂಡು ಮತ್ತೊಂದು ಟಿವಿಯನ್ನು ಒಡೆದು ಹಾಕಿದ್ದಾನೆ. ಕೂಡಲೆ ಸಿಬ್ಬಂದಿ ಆದಿತ್ಯನನ್ನು ಹಿಡಿದು ಜೈಲರ್‌ ವಶಕ್ಕೆ ಒಪ್ಪಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಸ್ವತ್ತು ನಾಶ

ಜೈಲಿನಲಿದ್ದ ಎರಡು ಟಿವಿಗಳನ್ನು ಒಡೆದು ಹಾಕಿರುವ ಆದಿತ್ಯ ವಿರುದ್ಧ ಸಾರ್ವಜನಿಕ ಸ್ವತ್ತು ನಾಶಪಡಿಸಿದ ಆರೋಪದಲ್ಲಿ ದೂರು ನೀಡಲಾಗಿದೆ. ಜೈಲಿನ ಚೀಫ್‌ ಸೂಪರಿಂಟೆಂಡೆಂಟ್‌ ಅವರು ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾನ್ಯನಲ್ಲ ಈ ಆದಿತ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ 2022ರ ಜನವರಿ 20ರಂದು ಐಇಡಿ ಬಾಂಬ್‌ ಇರುವ ಬ್ಯಾಗ್‌ ಪತ್ತೆಯಾಗಿತ್ತು. ಎರಡು ದಿನದ ಬಳಿಕ ಬೆಂಗಳೂರು ಪೊಲೀಸರು ಆದಿತ್ಯ ರಾವ್‌ ಎಂಬಾತನನ್ನು ಬಂಧಿಸಿದ್ದರು. ಮಂಗಳೂರಿನಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಆದಿತ್ಯ ರಾವ್‌ಗೆ 20 ವರ್ಷ ಜೈಲು ಶಿಕ್ಷೆಯಾಗಿದೆ. ಈತ ಶಿವಮೊಗ್ಗ ಜೈಲಿನ ಶಿಕ್ಷಾ ಬಂಧಿಯಾಗಿದ್ದಾನೆ.

ಇದನ್ನೂ ಓದಿ  –  ಮನೆಯಲ್ಲಿ ಚಿನ್ನಾಭರಣ, ಹಣ ಕಳ್ಳತನ, ಪೊಲೀಸರ ಬಲೆಗೆ ಬಿದ್ದಳು ಸೊಸೆ, ಸ್ನೇಹಿತನು ಅರೆಸ್ಟ್‌

ಆದಿತ್ಯ ರಾವ್‌ ಈ ಹಿಂದೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Airport), ರೈಲ್ವೆ ನಿಲ್ದಾಣಗಳಿಗೆ ಹುಸಿ ಬಾಂಬ್‌ ಕರೆ ಮಾಡಿದ್ದ. ಇದರಿಂದ ಸಾರ್ವಜನಿಕರು, ಪ್ರಯಾಣಿಕರು ತೀವ್ರ ಸಮಸ್ಯೆ ಅನುಭವಿಸಿದ್ದರು. ಈ ಪ್ರಕರಣಗಳಲ್ಲಿ ಆದಿತ್ಯ ರಾವ್‌ ಜೈಲು ಅನುಭವಿಸಿದ್ದ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment