SHIVAMOGGA LIVE NEWS | SENIOR CITIZEN | 23 ಏಪ್ರಿಲ್ 2022
ಪೋಷಕರಿಂದ ಆಸ್ತಿ, ಅಂತಸ್ತು ಮತ್ತಿತರ ಎಲ್ಲಾ ಸೌಲಭ್ಯವನ್ನು ಪಡೆದು ಅವರನ್ನು ನಿರಾಶ್ರಿತರನ್ನಾಗಿ ಮಾಡುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಅಂತಹ ಮಕ್ಕಳ ವಿರುದ್ಧ ದೂರು ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನುಷ್ಠಾನದಲ್ಲಿರುವ ವಿವಿಧ ಕಾರ್ಯಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ನಡೆಸಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಜೀವನದ ಸಂಧ್ಯಾಕಾಲದಲ್ಲಿ ಪೋಷಕರನ್ನು ರಕ್ಷಿಸಬೇಕಾದ ಮಕ್ಕಳು ಅವರನ್ನು ನಿರ್ಲಕ್ಷಿಸುತ್ತಿರುವುದು ಅಕ್ಷಮ್ಯ. ಸಂಬಂಧಿತ ಇಲಾಖಾ ಅಧಿಕಾರಿಗಳು ಸರ್ಕಾರದ ನೆರವಿನೊಂದಿಗೆ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರವನ್ನು ಪಡೆದು, ಸಂತ್ರಸ್ಥರ ನೆರವಿಗೆ ಧಾವಿಸುವಂತೆ ಸೂಚಿಸಿದರು.
ಬಾಲ್ಯ ವಿವಾಹದ ದೂರು
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಲ್ಲಲ್ಲಿ ಬಾಲ್ಯವಿವಾಹಗಳು ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಬಾಲ್ಯವಿವಾಹವನ್ನು ಪ್ರೋತ್ಸಾಹಿಸುವ, ಪ್ರೇರೇಪಿಸುವ ಹಾಗೂ ಬಾಲ್ಯವಿವಾಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬರ ಮೇಲೂ ದೂರು ದಾಖಲಿಸಬೇಕು. ಇದರಲ್ಲಿ ವಿವಾಹ ಆಮಂತ್ರಣ ಮುದ್ರಿಸಿದ ಮುದ್ರಕರನ್ನು ಸೇರಿಸಿ ದೂರು ದಾಖಲಿಸಬೇಕು ಎಂದರು.
ಬಾಲ್ಯವಿವಾಹವನ್ನು ನಿಯಂತ್ರಿಸುವಲ್ಲಿ ಎಲ್ಲರೂ ಶ್ರಮಿಸಬೇಕು. ವಿಶೇಷವಾಗಿ ಮಕ್ಕಳ ಪೋಷಕರು ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಬಗ್ಗೆ ಗಮನಹರಿಸಬೇಕು. ಬಾಲ್ಯವಿವಾಹದಂತ ಪ್ರಕರಣಗಳು ನಡೆಯುವ ಮುನ್ನ ಸ್ಥಳೀಯವಾಗಿರುವ ಶಾಲಾ ಶಿಕ್ಷಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಗಮನಹರಿಸಿ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ, ಪರಿವರ್ತನಾ ಸಂಸ್ಥೆಯ ನಿರ್ದೇಶಕ ಶಂಕರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪನಿರ್ದೇಶಕ ಜಿ.ಜಿ.ಸುರೇಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ನಾಗರಾಜ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯ ಮೂವರು ಇನ್ಸ್ ಪೆಕ್ಟರ್’ಗಳ ವರ್ಗಾವಣೆ, ಯಾರೆಲ್ಲರ ವರ್ಗವಾಗಿದೆ?
SENIOR CITIZEN
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200