ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 MARCH 2024
SHIMOGA : ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಹೆಸರು ಪ್ರಕಟವಾದ ಹಿನ್ನೆಲೆ, ಶಿವಮೊಗ್ಗದ ಅವರ ನಿವಾಸದ ಬಳಿ ಕಾರ್ಯಕರ್ತರು, ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು. ರಾಘವೇಂದ್ರ ಅವರನ್ನು ಭಜದ ಮೇಲಿರಿಸಿಕೊಂಡು ಕುಣಿದು, ಘೋಷಣೆ ಕೂಗಿದರು.
ಪಟ್ಟಿ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ವಿನೋಬನಗರದಲ್ಲಿರುವ ರಾಘವೇಂದ್ರ ಅವರ ಮನೆ ಮುಂದೆ ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ, ಘೋಷಣೆ ಕೂಗಿದರು.
ಇದೆ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಂಸದ ಬಿ.ವೈ.ರಾಘವೇಂದ್ರ, ಮತ್ತೊಮ್ಮೆ ನಮ್ಮ ಪಕ್ಷದ ವತಿಯಿಂದ ಸ್ಪರ್ಧೆ ಮಾಡುವ ಆಶೀರ್ವಾದ ಮಾಡಿದ್ದಾರೆ. ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. 400 ಪ್ಲೆಸ್ ಸೀಟು ಗೆಲ್ಲಬೇಕು ಎಂಬುದು ಪ್ರಧಾನಿ ಮೋದಿ ಅವರ ಗುರಿ. ಗೆಲವಿಗೆ ಪೂರಕ ವಾತಾವರಣ ಇದೆ. ಪ್ರಧಾನ ಮಂತ್ರಿ ಮೋದಿ ಅವರೇ ಮಾ.18 ರಂದು ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಇಲ್ಲಿಂದಲೇ ಪ್ರಚಾರ ಆರಂಭ ಆಗಲಿದೆ ಎಂದರು.
ಇದನ್ನೂ ಓದಿ – ಬಿಜೆಪಿ ಪಟ್ಟಿ, ಈಶ್ವರಪ್ಪ ಕುಟುಂಬದವರ ಕಣ್ಣೀರು, ಫೋನ್ ಕರೆ ಬೆನ್ನಿಗೆ ದಿಢೀರ್ ಹೊರನಡೆದ ಮಾಜಿ ಮಿನಿಸ್ಟರ್
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















