ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021
ಭಾರತದಲ್ಲಿ ನೂರು ಕೋಟಿ ಲಸಿಕೆ ನೀಡಿರುವುದಕ್ಕೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು.
![]() |
ಬಿಜೆಪಿ ಜಿಲ್ಲಾ ಕಚೇರಿ ಮುಂದೆ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಪರ ಘೋಷಣೆ ಕೂಗಿದರು.
ಇದೆ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಗಿರೀಶ್ ಪಟೇಲ್, ಕರೋನ ಮೊದಲ ಮತ್ತು ಎರಡನೆ ಅಲೆಯ ಸಂದರ್ಭ ದೇಶಾದ್ಯಂತ ಮೂರು ಲಕ್ಷ ಜನರು ಸಾವಿಗೀಡಾಗಿದ್ದಾರೆ. ಈ ಮಧ್ಯೆ ಹಲವು ದೇಶಗಳು ಕರೋನಾಗೆ ಲಸಿಕೆ ಕಂಡು ಹಿಡಿಯಲು ಮುಂದಾಗಿದ್ದವು. ಭಾರತ ಲಸಿಕೆ ಕಂಡು ಹಿಡಿದು ನೂರು ಕೋಟಿ ಲಸಿಕೆ ನೀಡಿ ಮೈಲಿಗಲ್ಲು ಸ್ಥಾಪಿಸಿದೆ ಎಂದರು.
ಸಾಗರದಲ್ಲಿ ಸಂಭ್ರಮಾಚಾರಣೆ
ಸಾಗರ ತಾಲೂಕು ಬಿಜೆಪಿ ಘಟಕದ ವತಯಿಂದಲೂ ಸಂಭ್ರಮಾಚರಣೆ ಮಾಡಲಾಯಿತು. ಶಾಸಕ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ನೇತೃತ್ವದಲ್ಲಿ ಸಂಭ್ರಮಾರಣೆ ನಡೆಯಿತು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಪ್ರಧಾನಿ ನರೇಂದ್ರ ಮೋದಿ ಪರವಾಗಿ ಘೋಷಣೆಗಳನ್ನು ಕೂಗಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200