ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ಘೋಷಣೆ, ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚಾರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 MARCH 2023

SHIMOGA : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಿರುದ್ಯೋಗಿ (Unemployed) ಯುವಕರಿಗೆ ‘ಯುವನಿಧಿ’ ಅಡಿ ನಿರುದ್ಯೋಗ ಭತ್ಯೆ ಘೋಷಿಸಿರುವುದಕ್ಕೆ ಶಿವಮೊಗ್ಗದಲ್ಲಿ NSUI ಸಂಘಟನೆ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಘೋಷಣೆ ಕೂಗಿದರು.

NSUI-celebration-over-Stipend-for-Unemployed

ಶಿವಮೊಗ್ಗ ಮಹಾವೀರ ವೃತ್ತದಲ್ಲಿ ಎನ್.ಎಸ್.ಯು.ಐ ಸಂಘಟನೆ ವತಿಯಿಂದ ಸಂಭ್ರಮಾಚರಣೆ ನಡೆಯಿತು.

ತಾಂಡವವಾಡುತ್ತಿದೆ ನಿರುದ್ಯೋಗ

ಬಿಜೆಪಿ ಸರ್ಕಾರ ಬಂದ ಮೇಲೆ ನಿರುದ್ಯೋಗ ತಾಂಡವವಾಡುತ್ತಿದೆ. ವಿದ್ಯಾವಂತರು ನಿರುದ್ಯೋಗದಿಂದ ಭ್ರಮನಿರಸನಗೊಂಡಿದ್ದಾರೆ. ಅವರಲ್ಲಿ ಭರವಸೆ ಮೂಡಿಸುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರು ಯುವನಿಧಿ ಅಡಿ ನಿರುದ್ಯೋಗ ಭತ್ಯೆ ಘೋಷಿಸಿದ್ದಾರೆ. ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ, ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1500 ರೂ.ಗಳ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.ಹೆಚ್.ಎಸ್.ಸುಂದರೇಶ್, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ
ಕಾಂಗ್ರೆಸ್ ಪಕ್ಷ ಈಗಾಗಲೇ ರಾಜ್ಯದ ಜನತೆಗೆ ಮೂರು ಗ್ಯಾರಂಟಿಗಳನ್ನು ನೀಡಿದೆ. ಮನೆಯೊಡತಿಗೆ ಮಾಸಿಕ 2 ಸಾವಿರ ರೂ. ಭತ್ಯೆ, ಪ್ರತಿ ವ್ಯಕ್ತಿಗೆ ತಲಾ 10 ಕೆ.ಜಿ. ಅಕ್ಕಿ, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗ್ಯಾರಂಟಿ ನೀಡಿದೆ. ಈಗ ನಾಲ್ಕನೇ ಗ್ಯಾರಂಟಿಯಾಗಿ ನಿರುದ್ಯೋಗಿ (Unemployed) ಪದವೀಧರರಿಗೆ ಮಾಸಿಕ 1500 ಮತ್ತು 3000 ರೂ.ಗಳ ನಿರುದ್ಯೋಗ ಭತ್ಯೆಯ ಗ್ಯಾರಂಟಿ ನೀಡುತ್ತಿದೆ. ಕಾಂಗ್ರೆಸ್ ಎಂದಿಗೂ ಜನಪರ, ಯುವಪರ ಪಕ್ಷವಾಗಿದೆ ಎಂದರು.ಕೆ.ಬಿ.ಪ್ರಸನ್ನ ಕುಮಾರ್, ಮಾಜಿ ಶಾಸಕ

NSUI Celebration over Rahul Gandhi Stipend for Unemployed in Shimoga Karnataka

ಕಾಂಗ್ರೆಸ್ ಜನಪರವಾಗಿರುವ ಪಕ್ಷ. ಕಾಂಗ್ರೆಸ್ ಆಡಳಿತ ನಡೆಸಿದಾಗ ಎಂದೂ ಜನವಿರೋಧಿಯಾಗಿ ನಡೆದುಕೊಂಡಿಲ್ಲ. ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿತ್ತು. ಈಗ ನಿರುದ್ಯೋಗಿ ಯುವಕರಿಗೆ ಆಸರೆಯಾಗಲಿ ಯುವನಿಧಿ ಯೋಜನೆಯನ್ನು ಘೋಷಿಸಲಾಗಿದೆ.ಆರ್.ಪ್ರಸನ್ನ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ

ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಎನ್.ರಮೇಶ್, ಎಸ್.ಪಿ. ದಿನೇಶ್, ವಿಜಯಕುಮಾರ್, ಜಿ.ಪಲ್ಲವಿ,  ವಿಶ್ವನಾಥ್ ಕಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಸಿಂಗ್, ಕಲೀಮ್ ಪಾಷಾ, ಹರ್ಷಿತ್, ಕಾಟಿಕೆರೆ ರವಿ, ಅಬ್ದುಲ್, ವರುಣ್ ವಿ ಪಂಡಿತ್, ಕುಮಾರ್, ಟೋಫಿಕ್, ಅಭಿ, ಚಂದ್ರ ಜಿ ರಾವ್, ಚರಣ್, ಕೆ.ಚೇತನ್, ಸಿ.ಜಿ. ಮಧುಸೂದನ್ ಸೇರಿದಂತೆ ಹಲವರಿದ್ದರು.

ಇದನ್ನೂ ಓದಿ – ಶಿವಮೊಗ್ಗದ ಸೆಂಟ್ರಲ್ ಜೈಲ್ ಮೇಲೆ ಪೊಲೀಸರಿಂದ ದಿಢೀರ್ ದಾಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 20, 2023

Leave a Comment