ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 AUGUST 2023
SHIMOGA : ನಗರದ ಸೂಳೆಬೈಲು ಸಮೀಪ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್ ಠಾಣೆ ಪೊಲೀಸರು ದಾಳಿ (Police Raid) ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ – ರಾತ್ರೋರಾತ್ರಿ ಅಡಿಕೆ ಕಳ್ಳತನ ಮಾಡುತ್ತಿದ್ದವರನ್ನು ಬೆನ್ನಟ್ಟಿ ಹಿಡಿದ ಗ್ರಾಮಸ್ಥರು
ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್‌ನಲ್ಲಿ ವ್ಯಕ್ತಿಯೊಬ್ಬ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ದಾಳಿ (Police Raid) ನಡೆಸಿದ ಪೊಲೀಸರು ಹೊಳಲೂರಿನ ಸದ್ದಾಂ ಹುಸೇನ್ ಅಲಿಯಾಸ್ ಸಾಂಬಾ (30) ಎಂಬಾತನನ್ನು ಬಂಧಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈತನ ಬಳಿ 20 ಸಾವಿರ ರೂ. ಮೌಲ್ಯದ 330 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಡಿಸಿಆರ್‌ಬಿ ಡಿವೈಎಸ್‌ಪಿ ಡಿ.ಟಿ.ಪ್ರಭು, ಸಿಇಎನ್ ಠಾಣೆ ಇನ್ಸ್‌ಪೆಕ್ಟರ್ ದೀಪಕ್ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422