ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೆ ವೇಳೆ ಮಾತನಾಡಿದ ನಿತಿನ್ ಗಡ್ಕರಿ, ಜಿಲ್ಲೆಯ ಅಭಿವೃದ್ಧಿಗೆ ಕುರಿತು ಕೆಲವು ಪ್ರಮುಖ ಸಂಗತಿ ಪ್ರಸ್ತಾಪಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದ 6,168.41 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿದರು. 2,138.30 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಗಡ್ಕರಿ ಹೇಳಿದ 4 ಪ್ರಮುಖಾಂಶ
ಅಮೆರಿಕ ಶ್ರೀಮಂತವಾಗಿರಲು ರಸ್ತೆಗಳು ಚೆನ್ನಾಗಿರುವುದೇ ಕಾರಣ ಎಂದು ಅಲ್ಲಿನ ಅಧ್ಯಕ್ಷ ಜಾನ್ ಎಫ್.ಕೆನಡಿ ಹೇಳಿದ್ದರು. ಅದೇ ಮಾತು ದೇಶದ ಸಂಪರ್ಕ ಜಾಲದಲ್ಲಿ ಕ್ರಾಂತಿ ಮಾಡಲು ನನಗೆ ಸ್ಫೂರ್ತಿ. ಹೊಸ ರಸ್ತೆಗಳ ನಿರ್ಮಾಣ, ಹೆದ್ದಾರಿಗಳ ವಿಸ್ತರಣೆಯಿಂದಾಗಿ ಶಿವಮೊಗ್ಗದಲ್ಲಿ ವ್ಯಾಪಾರ, ಕೈಗಾರಿಕೆ, ಶಿಕ್ಷಣ ಕ್ಷೇತ್ರಗಳಲ್ಲಿ ಸಮಗ್ರ ಅಭಿವೃದ್ಧಿ ಆಗಲಿದೆ.
ಸಂಸದ ಬಿ.ವೈ.ರಾಘವೇಂದ್ರ ಜಿಲ್ಲೆಗೆ ಅವಶ್ಯವಿರುವ ಕೆಲಸಗಳ ಕುರಿತು ನಿರಂತರವಾಗಿ ನನ್ನ ಗಮನ ಸೆಳೆಯುತ್ತಿದ್ದಾರೆ. 3 ಕಡೆ ಹೈಮಾಸ್ಟ್ ದೀಪಗಳನ್ನು ಕೇಳಿದ್ದು, ಶಿವಮೊಗ್ಗದ ಬೊಮ್ಮನಕಟ್ಟೆ ಹಾಗೂ ಅರಸಾಳು ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗುವುದು. ಶಿವಮೊಗ್ಗ ಹೊರ ವರ್ತುಲ ರಸ್ತೆ ನಿರ್ಮಾಣವಾಗುತ್ತಿದೆ. ಉತ್ತರ ಭಾಗದಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡ ಬಳಿಕ ಮತ್ತೊಂದು ಹಂತದ ಕಾಮಗಾರಿ ಮಂಜೂರು ಮಾಡಲಾಗುವುದು.
ತುಮಕೂರು – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ 206ನ್ನು ಚತುಷ್ಪಥವಾಗಿ 6,500 ಕೋಟಿ ರೂ. ವಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. 2025ರ ಜನವರಿಗೆ ಇದು ಪೂರ್ಣವಾಗಲಿದೆ. ಈ ರಸ್ತೆ ಪೂರ್ಣಗೊಳ್ಳುವುದರಿಂದ ಶಿವಮೊಗ್ಗದಲ್ಲಿ ಕೈಗಾರಿಕ ಮತ್ತು ಆರ್ಥಿಕ ಅಭಿವೃದ್ಧಿ ಆಗಲಿದೆ. ಬೆಂಗಳೂರಿಗೆ ಐದು ತಾಸಿನ ಪ್ರಯಾಣ ಎರಡೂವರೆ ತಾಸಿಗೆ ಮುಗಿಯಲಿದೆ.
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡುವ ಬಗ್ಗೆ ಬಿ.ವೈ.ರಾಘವೇಂದ್ರ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದರ ಬಗ್ಗೆ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಪರಿಶೀಲನೆ ನಡೆಸಲಾಗುತ್ತದೆ. ಕೊಡಚಾದ್ರಿ – ಕೊಲ್ಲೂರು ಕೇಬಲ್ ಕಾರ್ ಯೋಜನೆಗೆ ಅನುಮತಿ ನೀಡಲಾಗುತ್ತದೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್. ಚನ್ನಬಸಪ್ಪ, ಗುರುರಾಜ ಶೆಟ್ಟಿ ಗಂಟಿಹೊಳೆ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಹಾಜರಿದ್ದರು.