ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೀಘ್ರ ವಿದ್ಯಾರ್ಥಿ ವೇತನ ಮಂಜೂರು ಮಾಡಬೇಕು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಒತ್ತಾಯಿಸಿದೆ.
ಈ ಸಂಬಂಧ ಅಲ್ಪಸಂಖ್ಯಾತ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಿಎಫ್ಐ ಕಾರ್ಯಕರ್ತರು, ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಈವರೆಗು ವಿದ್ಯಾರ್ಥಿ ವೇತನ ಮಂಜೂರಾಗಿಲ್ಲ. ಕೂಡಲೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು. ಇದರಿಂದ ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ ಎಂದು ಮನವಿ ಮಾಡಿದರು.
ಕೇಂದ್ರ ಸರ್ಕಾರ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ಆದರೆ ತಾಂತ್ರಿಕ ಸಮಸ್ಯೆಯಿಂದಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ತೊಂದರೆ ಆಗುತ್ತಿದೆ. ಇದನ್ನು ಸರಿಪಡಿಸಿ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಮಜಾಹಿದ್ ಮನವಿ ಸಲ್ಲಿಸಿದ್ದಾರೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]