ಶಿವಮೊಗ್ಗದಲ್ಲಿ ಸರಣಿ ಸರಗಳ್ಳತನ, 3 ಠಾಣೆ ವ್ಯಾಪ್ತಿಯಲ್ಲಿ 3 ಕಡೆ ಸರಗಳವು, ಒಂದು ಕಡೆ ವಿಫಲ ಯತ್ನ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 21 DECEMBER 2023

SHIMOGA : ನಗರದಲ್ಲಿ ಸರಣಿ ಸರಗಳ್ಳತನ ಪ್ರಕರಣ ವರದಿಯಾಗಿದ್ದು ಮಹಿಳೆಯರು ಆತಂಕಕ್ಕೀಡಾಗಿದ್ದಾರೆ. ಮೂರು ಕಡೆ ಸರಗಳ್ಳತನವಾಗಿದೆ. ಒಂದು ಕಡೆ ವಿಫಲ ಯತ್ನಾವಾಗಿದೆ. ಬುಧವಾರ ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ಎಲ್ಲೆಲ್ಲಿ ಹೇಗಾಯ್ತು ಘಟನೆ?

ಘಟನೆ 1 : ಮಂಗಳವಾರ ರಾತ್ರಿ ಓಲ್ಡ್‌ ಬಾರ್‌ ಲೈನ್‌ ರಸ್ತೆಯಲ್ಲಿ ಮೊಟ್ಟೆ ತರಲು ತೆರಳುತ್ತಿದ್ದ ಮಹಿಳೆಯ ಕೊರಳಿಗೆ ಕೈ ಹಾಕಿ 20 ಗ್ರಾಂ ತೂಕದ ಚಿನ್ನದ ಸರ ಕಳ್ಳತನ ಮಾಡಲಾಗಿದೆ. ಇದರ ಮೌಲ್ಯ 1.10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆ 2 : ಕೋಟೆ ರಸ್ತೆಯಲ್ಲಿ ರಂಗೋಲೆ ಹಾಕುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ.

ಘಟನೆ 3 : ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಸಮೀಪ ಪತಿಯೊಂದಿಗೆ ಕಾಲಭೈರವೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಯ ಸರ ದೋಚಲಾಗಿದೆ. 55 ಗ್ರಾಂ ತೂಕದ ಮಾಂಗಲ್ಯ ಸರದ ಮೌಲ್ಯ 3 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಘಟನೆ 4 : ವಿನೋಬನಗರ 60 ಅಡಿ ರಸ್ತೆಯಲ್ಲಿ ಯುವತಿಯೊಬ್ಬಳ ಕೊರಳಲ್ಲಿ ಇದ್ದ ಚಿನ್ನದ ಸರ ಕಳ್ಳತನ ಮಾಡಲಾಗಿದೆ.

ಸರಗಳ್ಳತನ ಪ್ರಕರಣ ಸಂಬಂಧ ಕೋಟೆ, ದೊಡ್ಡಪೇಟೆ ಮತ್ತು ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ಮಹಿಳೆಗೆ ದೆಹಲಿ ವಿಮಾನ ನಿಲ್ದಾಣದಿಂದ ಬಂತು ಫೋನ್‌, ಆಮೇಲೆ ಕಾದಿತ್ತು ಬಿಗ್‌ ಶಾಕ್

Leave a Comment