ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 NOVEMBER 2023
SHIMOGA : ಬಸ್ ಹತ್ತುವಾಗ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಪರ್ಸ್ ಕಳ್ಳತನದ ಮತ್ತೊಂದು ಪ್ರಕರಣ ವರದಿಯಾಗಿದೆ. ನಗರದ KSRTC ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.
ಸಾಗರದ ಪುಷ್ಪಾ ಅವರ ಬ್ಯಾಗ್ನಲ್ಲಿದ್ದ ಕಪ್ಪು ಪರ್ಸ್ ಕಳ್ಳತನವಾಗಿದೆ. ಅದರಲ್ಲಿ 1.50 ಲಕ್ಷ ರೂ. ಮೌಲ್ಯದ ಬಂಗಾರದ ಚೈನ್, 4 ಸಾವಿರ ರೂ ನಗದು ಮತ್ತು ಆಧಾರ್ ಕಾರ್ಡ್ ಇತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪುಷ್ಪಾ ಅವರು ಶಿವಮೊಗ್ಗದಲ್ಲಿ ಸಂಬಂಧಿಯೊಬ್ಬರ ಮನೆ ಗೃಹ ಪ್ರವೇಶ ಕಾರ್ಯಕ್ರಮ ಮುಗಿಸಿ ಸಾಗರದಲ್ಲಿರುವ ಮನೆಗೆ ಹಿಂತಿರುಗುತ್ತಿದ್ದರು. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಾಗರದ ಬಸ್ ಹತ್ತಿ ಕಂಡಕ್ಟರ್ಗೆ ಆಧಾರ್ ಕಾರ್ಡ್ ತೋರಿಸಲು, ಪರ್ಸ್ ತೆಗೆಯಲು ಮುಂದಾದಾಗ ಕಳ್ಳತನ ಬೆಳಕಿಗೆ ಬಂದಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಕಾಂಪೌಂಡ್ ವಿಚಾರಕ್ಕೆ ಪ್ರತಿಭಟನೆ, ಪೊಲೀಸರ ಜೊತೆ ಮಾತಿಗೆ ಮಾತು, ಕಾರಣವೇನು?
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















