ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 31 AUGUST 2023
SHIMOGA : ಫೇಸ್‌ಬುಕ್‌ನಲ್ಲಿ (Facebook) ಮಹಿಳೆಗೆ ಅವಹೇಳನ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಾಗಿರುವ ಹಿನ್ನೆಲೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthi Sulibele) ವಿನೋಬನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಈ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಘೋಷಣೆ ಕೂಗಿದರು.
ಬುಧವಾರ ರಾತ್ರಿ ಶಾಸಕ ಎಸ್.ಎನ್.ಚನ್ನಬಸಪ್ಪ ಅವರೊಂದಿಗೆ ಚಕ್ರವರ್ತಿ ಸೂಲಿಬೆಲೆ ವಿನೋಬನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಕಾಂಗ್ರೆಸ್ ಕಾರ್ಯಕರ್ತೆ ಸೌಗಂಧಿಕ ದಾಖಲಿಸಿರುವ ದೂರಿನ ಸಂಬಂಧ ಹೇಳಿಕೆ ನೀಡಿದರು.
ಠಾಣೆ ಮುಂದೆ ಕಾರ್ಯಕರ್ತರ ದಂಡು
ಠಾಣೆಗೆ ತೆರಳಿದ ಚಕ್ರವರ್ತಿ ಸೂಲಿಬೆಲೆ ಅವರೊಂದಿಗೆ ವಿವಿಧ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಗಮಿಸಿದ್ದರು. ಠಾಣೆ ಹೊರಗೆ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುಳ್ಳು ದೂರು ದಾಖಲು ಮಾಡಿರುವುದಾಗಿ ಆರೋಪಿಸಿ ಘೋಷಣೆ ಕೂಗಿದರು.
ಇದನ್ನೂ ಓದಿ – ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯಿಂದ ಠಾಣೆಗೆ ದೂರು | 3 ಫಟಾಫಟ್ ನ್ಯೂಸ್
ಯಾರೆಲ್ಲ ಏನೇನು ಹೇಳಿದರು?
ಮಾಧ್ಯಮಗಳ ಜೊತೆ ಮಾತಾಡಿದ ಚಕ್ರವರ್ತಿ ಸೂಲಿಬೆಲೆ, ಇಂತಹ ಬೆದರಿಕೆಗಳಿಗೆ ಜಗ್ಗುವುದು ಇಲ್ಲ. ಬಗ್ಗುವುದು ಇಲ್ಲ. ಇದು ದೂರು ದಾಖಲಿಸಿಕೊಳ್ಳುವ ಸಂಗತಿಯೇ ಅಲ್ಲ. ಪ್ರಿಯಾಂಕ್ ಖರ್ಗೆ ಅವರು ಠಾಣೆ ಮೆಟ್ಟಿಲು ಹತ್ತಿಸುತ್ತೇನೆ ಎಂದಿದ್ದರು. ಸುಳ್ಳು ದೂರು ಕೊಡಿಸಿ ಠಾಣೆ ಮೆಟ್ಟಿಲು ಹತ್ತಿಸಿದ್ದಾರೆ. ದೂರಿಗೆ ನನ್ನ ಹೇಳಿಕೆಯನ್ನು ದಾಖಲಿಸಿದ್ದೇನೆ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಚಕ್ರವರ್ತಿ ಸೂಲಿಬೆಲೆ ಅವರಿಗೆ ನೊಟೀಸ್ ಜಾರಿ ಮಾಡಿದ್ದರು. ಈ ಹಿನ್ನೆಲೆ ಠಾಣೆಗೆ ಭೇಟಿ ನೀಡಿ ಹೇಳಿಕೆ ನೀಡಿದ್ದಾರೆ. ಇದರಿಂದ ರಾಷ್ಟ್ರಭಕ್ತ ಚಕ್ರವರ್ತಿ ಸೂಲಿಬೆಲೆ ಅವರಿಗೆ ಯಾವುದೆ ಅಪಮಾನವಾಗಿಲ್ಲ. ಅದರೆ ರಾಜ್ಯ ಸರ್ಕಾರಕ್ಕೆ ಅಪಮಾನವಾಗಿದೆ. ಉರಿ ಎಂಬ ಪದವನ್ನು ಇಷ್ಟು ದೊಡ್ಡ ವಿಷಯ ಮಾಡಿಕೊಂಡಿದ್ದಾರೆ. ಕಾಂಗ್ರೆಸಿಗರು ಉರ್ಕೊಳ್ಳೋದು ಬೇಡ. ಇದು ಆಡು ಭಾಷೆ ಎಂದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? – TOP 10 NEWS | ಓದಲು ಇಲ್ಲಿ ಕ್ಲಿಕ್ ಮಾಡಿ
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






