ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಒಂದು ದೇಶ, ಒಂದು ಚುನಾವಣೆ ಕುರಿತು ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ನರೇಂದ್ರ ಮೋದಿ ವಿಚಾರ ಮಂಚ್‍ನ ರಾಜ್ಯಾಧ್ಯಕ್ಷ ಬಳ್ಳೆಕೆರೆ ಸಂತೋಷ್ ಅವರು ತಿಳಿಸಿದರು.
ಇದನ್ನೂ ಓದಿ | ‘ಚಕ್ರವರ್ತಿ ಸೂಲಿಬೆಲೆ ಭರತನಾಟ್ಯ ಆಡ್ತಾರೋ, ಹಾಡು ಹೇಳ್ತಾರೋ, ಪರ್ಮಿಷನ್ ಕೊಟ್ಟರೆ ಕೇಸ್’
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಳ್ಳೆಕೆರೆ ಸಂತೋಷ್ ಅವರು, ನೆಹರೂ ಕ್ರೀಡಾಂಗಣದಲ್ಲಿ ಮಾರ್ಚ್ 27ರಂದು ಸಂಜೆ 5.30ಕ್ಕೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಇದನ್ನೂ ಓದಿ | ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ವಿರೋಧ
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ನರೇಂದ್ರ ಮೋದಿ ವಿಚಾರ ಮಂಚ್‍ನ ರಾಷ್ಟ್ರೀಯ ಅಧ್ಯಕ್ಷ ರವಿ ಚಾಣಕ್ಯ, ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಶಾಸಕ ಅಶೋಕ್ ನಾಯ್ಕ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವಿಚಾರ ಮಂಚ್‍ನ ಜಿಲ್ಲಾಧ್ಯಕ್ಷ ಪ್ರಶಾಂತ್ ಪಂಡಿತ್, ಪ್ರಮುಖರಾದ ಹರಿಕೃಷ್ಣ, ಸುರೇಖಾ ಮುರಳೀಧರ್, ಲಕ್ಷ್ಮೀ ಶ್ರೀನಿವಾಸ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






