ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 JUNE 2021
ಸೋಗಾನೆ ವಿಮಾನ ನಿಲ್ದಾಣ ಕಟ್ಟದ ವಿನ್ಯಾಸವನ್ನು (ಬ್ಲೂಪ್ರಿಂಟ್) ಜಿಲ್ಲಾಡಳಿತ ಬದಲಾಯಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಎಚ್ಚರಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಬಿಜೆಪಿಯ ಕಮಲದ ಚಿಹ್ನೆ ರೀತಿಯಲ್ಲಿ ಇಡೀ ಕಟ್ಟಡವನ್ನು ವಿನ್ಯಾಸಗೊಳಿಸಲಾಗಿದೆ. ವಿಮಾನ ನಿಲ್ದಾಣದ ಕಟ್ಟಡದಲ್ಲಿಯೂ ಪಕ್ಷದ ಚಿಹ್ನೆ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಸಹಮತ ನೀಡುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಆಡಳಿತದಲ್ಲಿ ಇದ್ದಾಕ್ಷಣ ಕಮಲದ ಚಿಹ್ನೆ ರೀತಿಯಲ್ಲಿಯೇ ಕಟ್ಟಡವನ್ನು ವಿನ್ಯಾಸಗೊಳಿಸಬೇಕೆಂದಿಲ್ಲ. ಪಕ್ಷದ ಫಂಡ್‍ನಿಂದ ವಿಮಾನ ನಿಲ್ದಾಣ ಮಾಡಿಲ್ಲ. ಜನರ ಹಣ ಇದಕ್ಕೆ ಹಾಕಲಾಗಿದೆ. ಆದ್ದರಿಂದ ಕಟ್ಟಡದ ವಿನ್ಯಾಸ ಬದಲಾಯಿಸಬೇಕು. ಜಿಲ್ಲೆಯ ಸಾಹಿತಿಗಳು ಅಥವಾ ಹೋರಾಟಗಾರರ ಹೆಸರು ನಿಲ್ದಾಣಕ್ಕೆ ನಾಮಕರಣ ಮಾಡಬೇಕು. 100 ಕೋಟಿಯಲ್ಲಿ ಪೂರ್ಣಗೊಳ್ಳಬೇಕಿದ್ದ ನಿಲ್ದಾಣಕ್ಕೆ 4೦೦ ಕೋಟಿ ವೆಚ್ಚ ತೋರಿಸಲಾಗಿದೆ. ಇದರಿಂದಾಗಿ ಕಿಕ್ ಪಡೆದಿರುವ ಅನುಮಾನ ವ್ಯಕ್ತವಾಗುತ್ತಿದೆ ಹೆಚ್.ಎಸ್.ಸುಂದರೇಶ್ ಆರೋಪಿಸಿದರು.

ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಮುಖಂಡರಾದ ವಿಶ್ವನಾಥ ಕಾಶಿ, ಯಮುನಾ ರಂಗೇಗೌಡ, ಚಂದ್ರಶೇಖರ್, ನಾಗರಾಜ್, ರಘು ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






