ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟಂಬರ್ 2020
ಹೆಗ್ಗೋಡಿನ ಚರಕ ಸಂಸ್ಥೆಯು ಕಳೆದ ಒಂದು ತಿಂಗಳಿಂದ ಮುಚ್ಚಿದ್ದು ಅನುದಾನ ಬಿಡುಗಡೆ ಮಾಡುವಲ್ಲಿ ಸರ್ಕಾರದ ನಿರ್ಲಕ್ಷ್ಯವೆ ಇದಕ್ಕೆ ಕಾರಣ ಎಂದು ಚರಕ ಸಂಸ್ಥೆಯ ಸಂಸ್ಥಾಪಕ ಪ್ರಸನ್ನ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ವಿವಿಧ ಯೋಜನೆಗಳಿಂದ ನೇಕಾರಿಕೆಗೆ ಸಹಾಯಧನ ಸೇರಿದಂತೆ ಒಟ್ಟು ೨.೫ ಕೋಟಿ ರೂ. ಸರ್ಕಾರದಿಂದ ಮಂಜೂರಾಗಬೇಕಿದೆ. ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಈಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮ್ಮ ಸಂಸ್ಥೆಗೆ ಹಣ ಬಿಡುಗಡೆ ಮಾಡಲು ನಿರ್ಲಕ್ಷ ವಹಿಸಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ಆರೋಪಿಸಿದರು.
ನಮ್ಮ ಸಂಸ್ಥೆಯ ಹೆಣ್ಣು ಮಕ್ಕಳು ಧೈರ್ಯಗೆಡದೆ ಕೆರೆಹೊಳೆತ್ತುವ ಮತ್ತು ಸಂಸ್ಥೆಯ ಉತನ್ನಗಳನ್ನು ಹಲವು ಕಡೆಗಳಲ್ಲಿ ಹಂಚುವ ಮೂಲಕ ಸಂಸ್ಥೆ ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಗ್ರಾಮೋದ್ಯೋಗ ಉಳಿಸಿ ಘೋಷಣೆಯೊಂದಿಗೆ ಉತ್ತರಕರ್ನಾಟಕ ಸೇರಿ ರಾಜ್ಯದ ವಿವಿಧೆಡೆ ಕಾರ್ಯಕ್ರಮ ಹಾಗೂ ಅಕ್ಟೋಬರ್ ೨ ರಂದು ಗಾಂಧಿ ಜಯಂತಿ ಸಂದರ್ಭದಲ್ಲಿ ಹೆಗ್ಗೋಡಿನಲ್ಲಿ ಉಪವಾಸ ಸತ್ಯಾಗ್ರಹ, ಗ್ರಾಮ ಸ್ವಚ್ಛತೆ ಹಾಗೂ ಸಂಜೆ ಪ್ರಸಿದ್ಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು. ನಮ್ಮ ಸಮಸ್ಯೆ ಬಗೆಹರಿಸಲು ನಾವು ಬೆಂಗಳೂರಿಗೆ ಮತ್ತು ದೆಹಲಿಗೆ ಹೋಗಿ ಜನಪ್ರತಿನಿಧಿಗಳನ್ನು ಕೇಳಿಕೊಳ್ಳುವುದಿಲ್ಲ. ಅವರೇ ನಮ್ಮ ಸಮಸ್ಯೆ ಬಗೆಹರಿಸಲು ಇಚ್ಛಾಶಕ್ತಿ ತೋರಬೇಕು ಎಂದು ಪ್ರಸನ್ನ ತಿಳಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















