ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವವು ಫೆಬ್ರವರಿ 24 ರಿಂದ 28 ರವರೆಗೆ ಅದ್ಧೂರಿಯಾಗಿ ನಡೆಯಲಿದೆ. ಈ ಸಂದರ್ಭದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಸಂಚಾರ ಮಾರ್ಗಗಳಲ್ಲಿ ತಾತ್ಕಾಲಿಕ ಬದಲಾವಣೆ (traffic diversions) ಮಾಡಿ ಆದೇಶಿಸಿದ್ದಾರೆ.
ಜಾತ್ರಾ ಮಹೋತ್ಸವದ ಅಂಗವಾಗಿ ರಾಜಬೀದಿ ಉತ್ಸವ, ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ದೇವಸ್ಥಾನದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಫೆಬ್ರವರಿ 24 ರಿಂದ 28 ರವರೆಗೆ ಹೊಳೆಬಸ್ ಸ್ಟಾಪ್‌ನಿಂದ ಬೆಕ್ಕಿನ ಕಲ್ಮಠದ ಮೂಲಕ ರಾಮಣ್ಣ ಶ್ರೇಷ್ಠಿ ಪಾರ್ಕ್ ವರೆಗೆ ವಾಹನ ಸಂಚಾರ ಮತ್ತು ನಿಲುಗಡೆಗೆ ಅವಕಾಶವಿರುವುದಿಲ್ಲ.

ಫೆಬ್ರವರಿ 24 ರಂದು ಮುಂಜಾನೆ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಗಾಂಧಿ ಬಜಾರ್ ಹಾಗೂ ಶಿವಪ್ಪ ನಾಯಕ ಸರ್ಕಲ್ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಭಾರಿ ವಾಹನಗಳಿಗೆ ಮಾರ್ಗ ಬದಲಾವಣೆ
ಬೆಂಗಳೂರು, ಭದ್ರಾವತಿ ಮತ್ತು ಚಿತ್ರದುರ್ಗ ಕಡೆಯಿಂದ ಬರುವ ಭಾರಿ ವಾಹನಗಳು ಹಾಗೂ ಬಸ್‌ಗಳು ಎಂಆರ್‌ಎಸ್ ಸರ್ಕಲ್ ಬೈಪಾಸ್ ಮೂಲಕ ನಗರ ಪ್ರವೇಶಿಸಬೇಕು. ಸವಳಂಗ ಮತ್ತು ಶಿಕಾರಿಪುರ ಕಡೆಯಿಂದ ಬರುವ ವಾಹನಗಳು ಆಲ್ಕೊಳ ಹಾಗೂ ಸಾಗರ ರಸ್ತೆ ಮೂಲಕ ಸಂಚರಿಸಲು ಸೂಚಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ₹18,000 ಸಂಬಳದ ಕೆಲಸ ಖಾಲಿ ಇದೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಈ ಸಂಚಾರ ನಿಯಮಗಳು ಪೊಲೀಸ್ ವಾಹನಗಳು, ಅಂಬುಲೆನ್ಸ್ ಹಾಗೂ ತುರ್ತು ಸೇವಾ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
LATEST NEWS
- ಶಿವಮೊಗ್ಗದಲ್ಲಿ ಪ್ರಧಾನಿ ವಿರುದ್ಧ ಆಕ್ರೋಶ, ಮೋದಿ ರಾಜೀನಾಮೆಗೆ ಆಗ್ರಹ, ಕಾರಣವೇನು?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ವಾಹನಗಳ ಸಂಚಾರ ಮಾರ್ಗ ಬದಲಾವಣೆ, ಯಾವ್ಯಾವ ರಸ್ತೆ?

- ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ, ರಾಹುಲ್ ಗಾಂಧಿ ಪ್ರತಿಕೃತಿಗೆ ಬೆಂಕಿ

- ಕಾರ್ಯಕ್ರಮ ಮುಗಿಸಿ ಕುಟುಂಬದವರು ಮನೆಗೆ ಬಂದಾಗ ಬಾಗಿಲು ತೆರೆದಿತ್ತು, ತೀರ್ಥಹಳ್ಳಿಯಲ್ಲಿ ಕೇಸ್

- ಶಿವಮೊಗ್ಗದಲ್ಲಿ ಸೆಕೆ ಶುರು, ತಾಪಮಾನ ಹೆಚ್ಚಳ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ಉಷ್ಣಾಂಶ?

About The Editor
ನಿತಿನ್ ಆರ್.ಕೈದೊಟ್ಲು





