ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ವಾಹನಗಳ ಸಂಚಾರ ಮಾರ್ಗ ಬದಲಾವಣೆ, ಯಾವ್ಯಾವ ರಸ್ತೆ?

ಶಿವಮೊಗ್ಗ: ನಗರದ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವವು ಫೆಬ್ರವರಿ 24 ರಿಂದ 28 ರವರೆಗೆ ಅದ್ಧೂರಿಯಾಗಿ ನಡೆಯಲಿದೆ. ಈ ಸಂದರ್ಭದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಸಂಚಾರ ಮಾರ್ಗಗಳಲ್ಲಿ ತಾತ್ಕಾಲಿಕ ಬದಲಾವಣೆ (traffic diversions) ಮಾಡಿ ಆದೇಶಿಸಿದ್ದಾರೆ. ➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಜಾತ್ರಾ ಮಹೋತ್ಸವದ ಅಂಗವಾಗಿ ರಾಜಬೀದಿ ಉತ್ಸವ, ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Kote-Marikamba-Jathre-Vehicle-Route-Change

ದೇವಸ್ಥಾನದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಫೆಬ್ರವರಿ 24 ರಿಂದ 28 ರವರೆಗೆ ಹೊಳೆಬಸ್ ಸ್ಟಾಪ್‌ನಿಂದ ಬೆಕ್ಕಿನ ಕಲ್ಮಠದ ಮೂಲಕ ರಾಮಣ್ಣ ಶ್ರೇಷ್ಠಿ ಪಾರ್ಕ್ ವರೆಗೆ ವಾಹನ ಸಂಚಾರ ಮತ್ತು ನಿಲುಗಡೆಗೆ ಅವಕಾಶವಿರುವುದಿಲ್ಲ.

Kote-Marikamba-Jathre-Vehicle-Route-Change - traffic diversions

ಫೆಬ್ರವರಿ 24 ರಂದು ಮುಂಜಾನೆ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಗಾಂಧಿ ಬಜಾರ್ ಹಾಗೂ ಶಿವಪ್ಪ ನಾಯಕ ಸರ್ಕಲ್ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಭಾರಿ ವಾಹನಗಳಿಗೆ ಮಾರ್ಗ ಬದಲಾವಣೆ

ಬೆಂಗಳೂರು, ಭದ್ರಾವತಿ ಮತ್ತು ಚಿತ್ರದುರ್ಗ ಕಡೆಯಿಂದ ಬರುವ ಭಾರಿ ವಾಹನಗಳು ಹಾಗೂ ಬಸ್‌ಗಳು ಎಂಆರ್‌ಎಸ್ ಸರ್ಕಲ್ ಬೈಪಾಸ್ ಮೂಲಕ ನಗರ ಪ್ರವೇಶಿಸಬೇಕು. ಸವಳಂಗ ಮತ್ತು ಶಿಕಾರಿಪುರ ಕಡೆಯಿಂದ ಬರುವ ವಾಹನಗಳು ಆಲ್ಕೊಳ ಹಾಗೂ ಸಾಗರ ರಸ್ತೆ ಮೂಲಕ ಸಂಚರಿಸಲು ಸೂಚಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ₹18,000 ಸಂಬಳದ ಕೆಲಸ ಖಾಲಿ ಇದೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಈ ಸಂಚಾರ ನಿಯಮಗಳು ಪೊಲೀಸ್ ವಾಹನಗಳು, ಅಂಬುಲೆನ್ಸ್ ಹಾಗೂ ತುರ್ತು ಸೇವಾ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕಾರುಗಳಿಗೆ 30 ಪ್ರಮುಖ ಚೆಕಪ್‌ ಉಚಿತ, ಜುಲೈ 8ರವರೆಗೆ ಹಲವು ಆಫರ್‌, ಎಲ್ಲಿ? ಏನೇನೆಲ್ಲ ಆಫರ್‌ಗಳಿವೆ?