ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 28 MAY 2024
SHIMOGA : ಪುಂಡ, ಪೋಕರಿಗಳಿಗೆ ಹಾವಳಿ ತಡೆಗೆ, ವಿದ್ಯಾರ್ಥಿನಿಯರು, ಮಹಿಳೆಯರ ರಕ್ಷಣೆಗೆ ಆರಂಭಿಸಿರುವ ಚೆನ್ನಮ್ಮ ಪಡೆಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಚಾಲನೆ ನೀಡಿದರು. ಕಮಲಾ ನೆಹರು ಕಾಲೇಜಿನಲ್ಲಿ ಚೆನ್ನಮ್ಮ ಪಡೆಯ ಗಸ್ತು (Patrol) ವಾಹನಕ್ಕೆ ಹಸಿರು ನಿಶಾನೆ ತೋರಿಸಿದರು.
ಇದೆ ವೇಳೆ ಮಾತನಾಡಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಯಾವುದೇ ಕಾರಣಕ್ಕೂ ಕಿರಿಕಿರಿಗಳಿಂದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆ ಮತ್ತು ರಕ್ಷಣೆ ನೀಡುವುದು ಪೊಲೀಸ್ ಇಲಾಖೆ ಕರ್ತವ್ಯ. ಅವರ ರಕ್ಷಣೆ ಮಾಡುವಲ್ಲಿ ಸಮುದಾಯದತ್ತ ಪೊಲೀಸ್‌ನ ಒಂದು ಭಾಗವಾಗಿ ಚೆನ್ನಮ್ಮ ಪಡೆ ರಚಿಸಲಾಗಿದೆ. ಯಾರಾದರೂ ಹಿಂಬಾಲಿಸುವುದು, ಚುಡಾಯಿಸುವುದು ಮಾಡಿದರೆ ಭಯ ಪಡದೆ ಕೂಡಲೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.
ಇದನ್ನೂ ಓದಿ – ಮೊಬೈಲ್ ನೆಟ್‌ವರ್ಕ್‌ಗಾಗಿ ಟವರ್ ಏರಿದ ಗ್ರಾಮಸ್ಥರು, ಅಧಿಕಾರಿಗಳು ಸ್ಥಳಕ್ಕೆ ದೌಡು, ಫಿಕ್ಸ್ ಆಯ್ತು ಗಡುವು
ಕಾಲೇಜಿನ ಪ್ರಾಚಾರ್ಯ ಹೆಚ್.ಎಸ್.ನಾಗಭೂಷಣ್, ಕಸ್ತೂರಬಾ ಮಹಿಳಾ ಕಾಲೇಜಿನ ಪ್ರಾಚಾರ್ಯ ವೆಂಕಟೇಶ್, ಎಎಸ್ಪಿಗಳಾದ ಅನಿಲ್‌ಕುಮಾರ್ ಭೂಮರಡ್ಡಿ, ಎ.ಜಿ.ಕಾರ್ಯಪ್ಪ, ಡಿವೈಎಸ್ಪಿಗಳಾದ ಪ್ರಕಾಶ್, ಬಾಬು ಆಂಜನಪ್ಪ, ಎಂ.ಸುರೇಶ್ ಸೇರಿದಂತೆ ಹಲವರು ಇದ್ದರು.






