ಶಿವಮೊಗ್ಗದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಮೂರು ಸಾವಿರ ಪ್ರೋತ್ಸಾಹ ಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜೂನ್ 2020

ಕೊರೋನ ಸೋಂಕಿನ ಸಂಕಷ್ಟದ ಸಂದರ್ಭದಲ್ಲಿಯೂ ಜನರ ಹಿತ ಮತ್ತು ಆರೋಗ್ಯ ಕಾಪಾಡುವಲ್ಲಿ ಶ್ರಮಿಸುತ್ತಿರುವ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಇವುಗಳೊಂದಿಗೆ ಹಗಲಿರುಳು ಶ್ರಮಿಸುತ್ತಿರುವ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಶ್ರಮ ಅನನ್ಯವಾದುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

101536973 2896848203744531 6615397818037174272 o.jpg? nc cat=107& nc sid=110474& nc ohc=HiHb0NAh5tUAX8dWBPa& nc ht=scontent.fblr1 3

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಸಹಕಾರ ಇಲಾಖೆ ಹಾಗೂ ಜಿಲ್ಲೆಯ ಎಲ್ಲ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಗರದ ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಆಶಾ ಕಾರ್ಯಕರ್ತೆಯರಿಗೆ ಚೆಕ್ ವಿತರಣಾ ಸಮಾರಂಭದಲ್ಲಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಅವರು ಮಾತನಾಡಿದರು.

ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಶ್ರಮಿಸಿದ ಆಶಾ ಕಾರ್ಯಕರ್ತೆಯರ ರಕ್ಷಣೆಗೆ ಸರ್ಕಾರ  ಬದ್ಧವಾಗಿದೆ ಎಂದ  ಅವರು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಇರುವ ಹಾಲಿನ ಡೈರಿ, ಎಪಿಎಂಸಿ ಹಾಗೂ ಸಹಕಾರ ಸಂಘಗಳ ನೆರವಿನೊಂದಿಗೆ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತರಿಗೆ ಮೂರು ಸಾವಿರ ರೂಗಳ ಪ್ರೋತ್ಸಾಹ ಧನ ನೀಡಿ ಅವರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದರು.

ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಸಹಕಾರ ಇಲಾಖೆಯ ಜಂಟಿ ನಿಬಂಧಕರಿಗೆ ಇದರ ಸಂಪೂರ್ಣ ಹೊಣೆಗಾರಿಕೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯ 1034 ಆಶಾ ಕಾರ್ಯಕರ್ತೆಯರಿಗೆ ಈ ಸೌಲಭ್ಯ ದೊರೆಯಲಿದೆ. ಜಿಲ್ಲೆಯಲ್ಲಿ ಲಾಭದಾಯಕ ಸ್ಥಿತಿಯಲ್ಲಿರುವ 794 ಸಹಕಾರ ಸಂಘಗಳಿಂದ 1.65ಕೋಟಿ ರೂ.ಗಳ ಧನ ಸಂಗ್ರಹ ಮಾಡಲಾಗಿದೆ ಎಂದರು.

https://www.facebook.com/liveshivamogga/videos/2299124960381441/?t=4

ಆಶಾ ಕಾರ್ಯಕರ್ತೆಯರ ರಕ್ಷಣೆಗಾಗಿ ಡಿಸಿಸಿ ಬ್ಯಾಂಕ್ ಮೂಲಕ ಸಹಕಾರ ಸಂಘಗಳನ್ನು ರಚಿಸಿ ಅಗತ್ಯ ಸಾಲ-ಸೌಲಭ್ಯಗಳನ್ನು ಒದಗಿಸಲು ಉದ್ದೇಶಿಸಲಾಗಿದ್ದು , ಈ ಸಂಬಂಧ ಮುಖ್ಯಮಂತ್ರಿ ಜೊತೆ ಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿದೆ ಎಂದವರು ನುಡಿದರು.

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮ್ಯಾಮ್ಕೋಸ್ ಉಪಾಧ್ಯಕ್ಷ ವೈ ಎಸ್ ಸುಬ್ರಮಣ್ಯ, ಶಿಮುಲ್ ಅಧ್ಯಕ್ಷ ಆನಂದ್, ಮಂಡಿ ಮರ್ಚೆಂಟ್ಸ್ ಬ್ಯಾಂಕ್ ನ ಅಧ್ಯಕ್ಷ ಹೆಚ್.ಎಂ.ಮಧು, ಎಪಿಎಂಸಿ ಅಧ್ಯಕ್ಷ ದುಗ್ಗಪ್ಪ ಗೌಡ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಅಪರ ಜಿಲ್ಲಾಧಿಕಾರಿ ಅನುರಾಧಾ ಮುಂತಾದವರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 2, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment