SHIVAMOGGA LIVE NEWS | CHIEF MINISTER | 20 ಏಪ್ರಿಲ್ 2022
ಮಲೆನಾಡು ಭಾಗದಲ್ಲಿ ಅರಣ್ಯ ಭೂಮಿ ಸಾಗುವಳಿ ಸಂಬಂಧದ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಮೇ ಮೊದಲ ವಾರದಲ್ಲಿ ಪ್ರತ್ಯೇಕ ಸಭೆ ಕರೆಯಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕರಾವಳಿ ಮತ್ತು ಮಲೆನಾಡು ಭಾಗದ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ಕರೆಯುತ್ತಿದ್ದೇನೆ. ಮೇ ಮೊದಲ ವಾರದಲ್ಲಿ ಸಭೆ ಕರೆಯುತ್ತೇನೆ. ಶಿವಮೊಗ್ಗ ಮಾತ್ರವಲ್ಲ ಪಶ್ಚಿಮಘಟ್ಟ ವ್ಯಾಪ್ತಿಯ ಜಿಲ್ಲೆಗಳ ಬಗ್ಗೆ ಗಮನ ಹರಿಸಿ, ಪರಿಹಾರ ಹುಡುಕುತ್ತೇನೆ ಎಂದು ತಿಳಿಸಿದರು.
ಪ್ರತ್ಯೇಕ ನೀತಿ ರೂಪಿಸುತ್ತೇವೆ
ಭೂ ಕಬಳಿಕೆ ತಡೆಯಲು ಬೆಂಗಳೂರನ್ನು ಕೇಂದ್ರವಾಗಿ ಇಟ್ಟುಕೊಂಡು ಕಾನೂನು ರಚಿಸಲಾಯಿತು. ಆದರೆ ಅದನ್ನು ಇಡೀ ರಾಜ್ಯಕ್ಕೆ ಅನ್ವಯಿಸುವುದು ಸರಿಯಲ್ಲ. ಈ ಕಾನೂನಿನಿಂದಾಗಿ ರೈತರು ಬೆಂಗಳೂರಿನ ನ್ಯಾಯಾಲಯಕ್ಕೆ ಬರುವಂತಾಗಿದೆ. ಗ್ರಾಮೀಣ ಭಾಗ ಹೊರತುಪಡಿಸಿ ಪ್ರತ್ಯೇಕ ಭೂ ಕಬಳಿಕೆ ನೀತಿಯನ್ನು ಪ್ರತ್ಯೇಕವಾಗಿ ರೂಪಿಸಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ