ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಷ್ಟೊತ್ತಿಗೆ ಬರ್ತಾರೆ? ಎಲ್ಲಿಗೆಲ್ಲ ಭೇಟಿ ನೀಡ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 MAY 2024

ELECTION NEWS : ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಪ್ರಜಾಧ್ವನಿ ಸಮಾವೇಶ ಆಯೋಜಿಸಲಾಗಿದೆ. ಮೇ.2ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಡೆಯಲಿದ್ದು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿ ನೀಡಿಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯಿಂದ ವಿಶೇಷ ವಿಮಾನದಲ್ಲಿ ಹೊರಟು ಬೆಳಗ್ಗೆ 11ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಕಲಬುರಗಿಗೆ ತೆರಳಲಿದ್ದಾರೆ.

ಇದನ್ನೂ ಓದಿ – ತ್ಯಾಗರ್ತಿಯಲ್ಲಿ ನಟ ದುನಿಯಾ ವಿಜಯ್‌, ಶಿವರಾಜ್‌ ಕುಮಾರ್‌ ಅಬ್ಬರದ ಪ್ರಚಾರ, ಏನೇನು ಹೇಳಿದರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment