ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ದಿನಾಂಕ ಫಿಕ್ಸ್, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 20 JANUARY 2023

SHIMOGA : ಮುಖ್ಯಮಂತ್ರಿ (chief minister) ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 8ರಂದು ಶಿವಮೊಗ್ಗ ನಗರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

KS Eshwarappa Meeting at DC Office

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಸಮಾಲೋಚನೆ ನಡೆಸಿದರು.

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಮುಖ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು. ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ವಿವರಗಳನ್ನು ಜಿಲ್ಲಾಧಿಕಾರಿ ಅವರಿಗೆ ತಕ್ಷಣ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.

ಯಾವೆಲ್ಲ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ?

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ 23 ಶಾಲೆಗಳಲ್ಲಿ ಸ್ಮಾರ್ಟ್ ತರಗತಿಗಳನ್ನು ಅನುಷ್ಟಾನಗೊಳಿಸಲಾಗಿದೆ. ವಿವೇಕ ಶಾಲೆ ಯೋಜನೆಯಡಿ 14 ಕಾಮಗಾರಿಗಳ ಶಂಕುಸ್ಥಾಪನೆ, ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ 10 ಅಂಗನವಾಡಿಗಳ ಉದ್ಘಾಟನೆ ಹಾಗೂ ಇನ್ನೂ 11 ಅಂಗನವಾಡಿಗಳಿಗೆ ಶಂಕುಸ್ಥಾಪನೆ. ಈಗಾಗಲೇ ಪೂರ್ಣಗೊಂಡಿರುವ 300 ಆಶ್ರಯ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ. ನಿರ್ಮಿತಿ ಕೇಂದ್ರದ ವತಿಯಿಂದ ಕೈಗೊಳ್ಳಲಾಗಿರುವ 24 ಸಮುದಾಯ ಭವನಗಳ ಉದ್ಘಾಟನೆ. ಪ್ರಾದೇಶಿಕ ಲಸಿಕಾ ಕೇಂದ್ರಕ್ಕೆ ಶಂಕುಸ್ಥಾಪನೆ ಸೇರಿದಂತೆ ಎಲ್ಲಾ ಪ್ರಮುಖ ಕಾಮಗಾರಿಗಳ ವಿವರಗಳನ್ನು ಒದಗಿಸಬೇಕು ಎಂದು ಹೇಳಿದರು.

Shimoga Live 3 Milion Views Reach

ಈಗಾಗಲೇ 300 ಆಶ್ರಯ ಮನೆಗಳು ಪೂರ್ಣಗೊಂಡಿದೆ. ಅದಕ್ಕೆ ನೀರು, ವಿದ್ಯುತ್ ಮತ್ತು ಒಳಚರಂಡಿ ಸಂಪರ್ಕವನ್ನು ತಕ್ಷಣ ಕಲ್ಪಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ಒದಗಿಸಲು ಕ್ರಮ ಕೈಗೊಳ್ಳಬೇಕು. ಎನ್‍ಇಎಸ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಮುಖ್ಯ ಕಾರ್ಯನಿರ್ವಹಣಧಿಕಾರಿ ಪ್ರಕಾಶ್, ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ – ತೀರ್ಥಹಳ್ಳಿಯ ಇಬ್ಬರು, ಶಿವಮೊಗ್ಗದ ಒಬ್ಬ ವಿದ್ಯಾರ್ಥಿನಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment