ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 7 FEBRUARY 2023
SHIMOGA : ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿ ಅವರು ಫೆ.8ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ನಗರದಲ್ಲಿ ಕಾರ್ಯಕ್ರಮ ಮತ್ತು ಸಭೆ ನಡೆಸಲಿದ್ದಾರೆ.

ಫೆ.8ರಂದು ಮಧ್ಯಾಹ್ನ 12.15ಕ್ಕೆ ಬೆಂಗಳೂರು ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿದ್ದಾರೆ. ಮಧ್ಯಾಹ್ನ 1.35ಕ್ಕೆ ಶಿವಮೊಗ್ಗ ಹೆಲಿಪ್ಯಾಡ್ ತಲುಪಲಿದ್ದಾರೆ (Chief Minister). ಮಧ್ಯಾಹ್ನ 1.45ಕ್ಕೆ ಎನ್ಇಎಸ್ ಮೈದಾನದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಕೆಲಸದ ಹೆಸರಲ್ಲಿ ಮಹಾ ಮೋಸ, ದಾಖಲಾಯಿತು ಮೊದಲ ಕೇಸ್
ಮಧ್ಯಾಹ್ನ 3.30ಕ್ಕೆ ಸರ್ಕಿಟ್ ಹೌಸ್ ನಲ್ಲಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಕಾರ್ಮಿಕರ ನಿಯೋಗವನ್ನು ಭೇಟಿ ಮಾಡಲಿದ್ದಾರೆ. ಸಂಜೆ 4 ಗಂಟೆಗೆ ಸರ್ಕಿಟ್ ಹೌಸ್ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

CLICK HERE TO JOIN SHIVAMOGGA LIVE WHATSAPP GROUP




