ಶಿವಮೊಗ್ಗದಲ್ಲಿ ಮಂಜುನಾಥ ಭಂಡಾರಿಗೆ ಅದ್ಧೂರಿ ಸ್ವಾಗತ, ಬೈಕ್‌ ಜಾಥಾ, ಆಪಲ್‌ ಹಾರ ಹಾಕಿ ಸಂಭ್ರಮ

ಶಿವಮೊಗ್ಗ: ವಿಧಾನ ಪರಿಷತ್‌ ಮುಖ್ಯ ಸಚೇತಕರಾಗಿ ನೇಮಕವಾದ ಬಳಿಕ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ ಮಂಜುನಾಥ ಭಂಡಾರಿ ಅವರಿಗೆ ಯುವ ಕಾಂಗ್ರೆಸ್‌ ಮತ್ತು ಎನ್‌ಎಸ್‌ಯುಐ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು. (ಈ ಸುದ್ದಿಯನ್ನು ಇನ್ನು 42 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ನಗರದ ಎಂಆರ್‌ಎಸ್‌ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ ಮಂಜುನಾಥ ಭಂಡಾರಿ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಬೈಕ್‌ ರ‍್ಯಾಲಿ ಮೂಲಕ ಅವರನ್ನು ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಕರೆತರಲಾಯಿತು. ಈ ವೇಳೆ ಹೊಳೆ ಬಸ್‌ ನಿಲ್ದಾಣದಲ್ಲಿ ಅಭಿಮಾನಿಗಳು ಮಂಜುನಾಥ ಭಂಡಾರಿ ಅವರಿಗೆ ಆಪಲ್‌ ಹಾರ ಹಾಕಿದರು.

Congress-Party-Workers-Welcome-Manjunatha-Bandari-in-Shivamogga

ಕಾಂಗ್ರೆಸ್‌ ಪಕ್ಷದ ಕಚೇರಿ ಬಳಿ ಪಟಾಕಿ ಸಿಡಿಸಿದ ಕಾರ್ಯಕರ್ತರು, ಮಂಜುನಾಥ ಭಂಡಾರಿ ಅವರನ್ನು ಹೆಗಲ ಮೇಲೆ ಹೊತ್ತು ಸಾಗಿದರು. ಈ ವೇಳೆ ಘೋಷಣೆಗಳನ್ನು ಕೂಗಿ ಕಾರ್ಯಕರ್ತರು ಸಂಭ್ರಮಿಸಿದರು. ವಿಧಾನ ಪರಿಷತ್‌ ಸದಸ್ಯೆ ಬಲ್ಕಿಸ್‌ ಬಾನು, ಕಾಂಗ್ರೆಸ್‌ ಪಕ್ಷದ ಜಿಲ್ಲಾ ಅಧ್ಯಕ್ಷ ಹೆಚ್‌.ಸಿ.ಯೋಗೇಶ್‌, ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅ‍ಧ್ಯಕ್ಷ ಚೇತನ್‌ ಗೌಡ, ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಜೆ.ಮಧುಸೂದನ್‌, ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಕೆ.ದೇವೇಂದ್ರಪ್ಪ ಸೇರಿ ಹಲವರು ಇದ್ದರು.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: