ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ನವೆಂಬರ್ 2020
ತಂದೆ ಜೊತೆ ಭಿಕ್ಷಾಟನೆಯಲ್ಲಿ ತೊಡಗಿದ್ದ 9 ವರ್ಷದ ಬಾಲಕನೊಬ್ಬನನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಸಾಗರ ರಸ್ತೆಯ ಆಯನೂರು ಗೇಟ್ ಬಳಿ ಅಲೆಮಾರಿ ಜನಾಂಗದ ಬಾಲಕನೊಬ್ಬ ಮಾರಮ್ಮ ದೇವಿಯ ಮೂರ್ತಿ ಹೊತ್ತುಕೊಂಡು ಭಿಕ್ಷಾಟನೆ ಮಾಡುತ್ತಿದ್ದ. ಈತನ ತಂದೆಯು ಜೊತೆಗಿದ್ದರು.
ಸಾರ್ವಜನಿಕರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಗಾಯತ್ರಿ ಮತ್ತು ಸಹಾಯವಾಣಿ ಸಂಯೋಜಕ ಪರಶುರಾಮ್ ಅವರು ಬಾಲಕನನ್ನು ರಕ್ಷಿಸಿ, ಸುರಭಿ ಕೇಂದ್ರದಲ್ಲಿ ಇರಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]