ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 1 AUGUST 2024 : ಅಪಾಯದ ಸ್ಥಿತಿಯಲ್ಲಿರುವ ಮರಗಳ (tree) ರೆಂಬೆ, ಕೊಂಬೆಗಳನ್ನು ಶೀಘ್ರ ತೆರವು ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅರಣ್ಯ ಇಲಾಖೆ, ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಬಿರುಗಾಳಿ, ಮಳೆಗೆ ದುರ್ಬಲ ಮರಗಳು ಬಿದ್ದು ಪ್ರಾಣ ಹಾನಿ ಉಂಟಾಗಬಹುದು. ಈ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ದೈತ್ಯ ಮತ್ತು ದುರ್ಬಲ ಮರಗಳ ಸ್ಥಿತಿ ಗಮನಿಸಿ, ಕೂಡಲೇ ಕ್ರಮ ಕೈಗೊಳ್ಳಬೇಕು. ಈಗಾಗಲೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 112 ಮರಗಳು ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ 1200 ಮರಗಳನ್ನು ಗುರುತಿಸಲಾಗಿದೆ. ಅವುಗಳ ಕುರಿತ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮರಗಳು ದುರ್ಬಲಗೊಂಡಿದ್ದರೆ ಅವಳನ್ನು ತೆರವು ಮಾಡುವ ಮೊದಲು ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಚರ್ಚೆ ನಡೆಸಬೇಕು.ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ
ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಸೇರಿದಂತೆ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.