ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 NOVEMBER 2020
ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕ್ರೈಸ್ತ ಸಮುದಾಯದವರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಕ್ರೈಸ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕ್ರೈಸ್ತ ಒಕ್ಕೂಟ ಇವತ್ತು ಜಿಲ್ಲಾಧಿಕಾರಿ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದ ಕ್ರೈಸ್ತ ಸಮುದಾಯದವರು, ಮತಾಂತರದ ನೆಪದಲ್ಲಿ ಕೆಲವು ಸಂಘಟನೆಗಳು ಕಾನೂನು ಕೈಗೆತ್ತಿಕೊಳ್ಳುತ್ತಿವೆ. ಸರ್ಕಾರದ ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಕೆಲವರು ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಹಲ್ಲೆಯಾದ ಸಂದರ್ಭ ಪೊಲೀಸರು ದೂರು ಸ್ವೀಕರಿಸಲು ಕೂಡ ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಬಿ.ಏಸುದಾಸ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.
VIDEO REPORT
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]