ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 DECEMBER 2020
ಕೋವಿಡ್ ಆತಂಕದ ನಡುವೆಯು ಶಿವಮೊಗ್ಗದಲ್ಲಿ ಇವತ್ತು ಭಕ್ತಿ ಮತ್ತು ಸಂಭ್ರಮದಿಂದ ಕ್ರಿಸ್‍ಮಸ್ ಹಬ್ಬವನ್ನು ಆಚರಿಸಲಾಯಿತು. ನೈಟ್ ಕರ್ಫ್ಯೂ ಭೀತಿ, ಕೋವಿಡ್ ನಿಯಮ ಪಾಲಿಸಬೇಕಿರುವುದರಿಂದ ಸಾಮೂಹಿಕ ಪ್ರಾರ್ಥನೆಯನ್ನು ಬೇಗ ಮುಕ್ತಾಯ ಮಾಡಲಾಗಿದೆ.

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಬೇಗ ಮುಗಿದ ಪ್ರಾರ್ಥನೆ
ಪ್ರತಿ ವರ್ಷ ರಾತ್ರಿ 12 ಗಂಟೆಗೆ ಕ್ರೈಸ್ತರು ಚರ್ಚ್‍ಗಳಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸುತ್ತಿದ್ದರು. ಆದರೆ ಈ ಬಾರಿ ರಾತ್ರಿ ವೇಳೆಗಾಗಲೆ ಕ್ರಿಸ್‍ಮಸ್ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸೇಕ್ರೆಡ್ ಹಾರ್ಟ್ ಚರ್ಚ್‍ನಲ್ಲಿ ಭಕ್ತರ ಹೊರತು ಮತ್ಯಾರಿಗೂ ಪ್ರವೇಶ ನೀಡಲಿಲ್ಲ.

ಕೋವಿಡ್ ನಿಯಮ ಪಾಲನೆ
ಸಾಮೂಹಿಕ ಪ್ರಾರ್ಥನೆಗೆ ಕೋವಿಡ್ ನಿಯಮ ಪಾಲನೆ ಕಡ್ಡಾಯಗೊಳಿಸಲಾಗಿತ್ತು. ಚರ್ಚ್‍ನ ಒಳ ಹೋಗುವ ಮುನ್ನ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ಮಾಡಲಾಯಿತು. ಸಾಮೂಹಿಕ ಪ್ರಾರ್ಥನೆ ವೇಳೆಯಲ್ಲಿ ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿತ್ತು.
ಚರ್ಚ್‍ಗೆ ವಿದ್ಯುತ್ ದೀಪಾಲಂಕರ
ಕ್ರಿಸ್‍ಮಸ್ ಹಿನ್ನೆಲೆ ಶಿವಮೊಗ್ಗದ ಎಲ್ಲಾ ಚರ್ಚ್‍ಗಳಿಗೂ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಪ್ರಮುಖವಾಗಿ ಸೇಕ್ರೆಡ್ ಹಾರ್ಟ್ ಚರ್ಚ್ ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ಪ್ರಾರ್ಥನೆ ಮುಗಿಯುತ್ತಿದ್ದಂತೆ ಚರ್ಚ್ ಬಾಗಿಲು ಬಂದ್ ಮಾಡಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಯಿತು.
PHOTO GALLERY














ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು
















