ಶಿವಮೊಗ್ಗ ದಸರಾಗೆ ಸಾಲು ಸಾಲು ಸಿನಿಮಾ ಸ್ಟಾರ್‌ಗಳು , ಈ ಬಾರಿ ಯಾರೆಲ್ಲ ಬರ್ತಿದ್ದಾರೆ? ಯಾವೆಲ್ಲ ಸಿನಿಮಾ ಇರಲಿದೆ?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗ: ಚಲನಚಿತ್ರ ದಸರಾದಲ್ಲಿ ಈ ಬಾರಿ ಮೂರು ಸಿನಿಮಾಗಳು (Cinema) ಪ್ರದರ್ಶನವಾಗಲಿವೆ. ನಗರದ ಎರಡು ಚಿತ್ರಮಂದಿರಗಳಲ್ಲಿ ಪ್ರದರ್ಶನ ಆಯೋಜಿಸಲಾಗಿದೆ.

ಸೆ.25ರಂದು ಬೆಳಗ್ಗೆ 9.30ಕ್ಕೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ತಲೆದಂಡ ಸಿನಿಮಾ ಪ್ರದರ್ಶನವಾಗಲಿದೆ. ಸೆ.26ರಂದು ಬೆಳಗ್ಗೆ 9.30ಕ್ಕೆ ಜೀನಿಯಸ್‌ ಮುತ್ತ, ಸೆ.27ರಂದು ಬೆಳಗ್ಗೆ 9.30ಕ್ಕೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಗರುಡ ಗಮನ ವೃಷಭ ವಾಹನ ಸಿನಿಮಾಗಳು ಪ್ರದರ್ಶನವಾಗಲಿದೆ.

ಸಾಲು ಸಾಲು ಸಿನಿಮಾ ಸ್ಟರ್‌ಗಳು

ಇನ್ನು, ಶಿವಮೊಗ್ಗ ದಸರಾದಲ್ಲಿ ಈ ಬಾರಿ ಚಿತ್ರರಂಗದ ಖ್ಯಾತ ಕಲಾವಿದರು ಭಾಗವಹಿಸಲಿದ್ದಾರೆ. ಸೆ.24ರಂದು ಚಲನಚಿತ್ರ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ನಟ ಶರಣ್‌, ನಟಿ ಕಾರುಣ್ಯ ರಾಮ್‌ ಭಾಗವಹಿಸಲಿದ್ದಾರೆ. ಅದೇ ದಿನ ನಿರ್ದೇಶಕ ಸಾಯಿ ಪ್ರಕಾಶ್‌, ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಕೂಡ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

cinema-Actors-For-Shimoga-Dasara-2025.

ಸೆ.26ರಂದು ನಗೆ ಹಬ್ಬದಲ್ಲಿ ನಟ ಮುಖ್ಯಮಂತ್ರಿ ಚಂದ್ರು ಪಾಲ್ಗೊಳ್ಳಲಿದ್ದಾರೆ. ಸೆ.28ರಂದು ಮ್ಯೂಸಿಕಲ್‌ ನೈಟ್ಸ್‌ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ ಕುಮಾರ್‌ ಭಾಗವಹಿಸಲಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ಹಿನ್ನೆಲೆ ಗಾಯಕ ಹೇಮಂತ್‌ ಕುಮಾರ್‌, ಅನುರಾಧ ಭಟ್‌, ಸರಿಗಮಪ ತಂಡ, ಗಿಚ್ಚಿಗಿಲಿಗಿಲಿ ಕಾರ್ಯಕ್ರಮದ ಕಲಾವಿದರು ಭಾಗವಹಿಸಲಿದ್ದಾರೆ.  ಸೆ.30ರಂದು ನಟಿ ಗೀತಾ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅ.1ರಂದು ನಟಿ ಹರ್ಷಿಕಾ ಪೂಣಚ್ಚ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

JNNCE-Admission-Advt-scaled

ಇದನ್ನೂ ಓದಿ » ಶಿವಮೊಗ್ಗದ ನಾಗಸುಬ್ರಹ್ಮಣ್ಯ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ, ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ ಇರಲಿದೆ?

news, Shivamogga, Dasara, Cinema Dasara, Kannada movies, film festival, celebrity, Shivrajkumar, Sharan, entertainment, local news.

Leave a Comment