ಶಿವಮೊಗ್ಗದ ವಿದ್ಯಾನಗರ ಮೇಲ್ಸೇತುವೆ ಸರ್ಕಲ್‌ಗೆ ನಾಮಕರಣ, ನಾಮಫಲಕ ಅನಾವರಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ವಿದ್ಯಾನಗರದ ಮೇಲ್ಸೇತುವೆ ಸಂಪರ್ಕಿಸುವ ಸರ್ಕಲ್‌ಗೆ ಮಹರ್ಷಿ ವಾಲ್ಮೀಕಿ ವೃತ್ತ (Valmiki Circle) ಎಂದು ಹೆಸರಿಡಲಾಗಿದೆ. ವಾಲ್ಮೀಕಿ ಜಯಂತಿಯನ್ನು ಶಾಸಕ ಎಸ್‌.ಎನ್.ಚನ್ನಬಸಪ್ಪ, ಮಹರ್ಷಿ ವಾಲ್ಮೀಕಿ ವೃತ್ತದ ನಾಮಫಲಕ ಅನಾವರಣಗೊಳಿಸಿದರು.

ಸೈನ್ಸ್‌ ಮೈದಾನದವರೆಗೆ ಮೆರವಣಿಗೆ

ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದ ಸೈನ್ಸ್‌ ಮೈದಾನದಿಂದ ವಾಲ್ಮೀಕಿ ಸಭಾಭವನದವರೆಗೆ ಮೆರವಣಿಗೆ ನಡೆಸಲಾಯಿತು. ವಾಲ್ಮೀಕಿ ಭಾವಚಿತ್ರವನ್ನು ವಾಹನದಲ್ಲಿ ಇರಿಸಿ ಸಮುದಾಯದವರು ಮೆರವಣಿಗೆಯಲಿ ಪಾಲ್ಗೊಂಡಿದ್ದರು. ವಾಲ್ಮೀಕಿ ಸಭಾ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶಾಸಕ ಎಸ್‌.ಎನ್‌. ಚನ್ನಸಬಪ್ಪ ಉದ್ಘಾಟಿಸಿದರು.

ರಾಮಾಯಣದ ನೂರಾರು ಪಾತ್ರಗಳ ಮೂಲಕ ದೇಶಭಕ್ತಿ, ಮಾನವೀಯತೆ, ಸಮಾನತೆ, ಕಾರುಣ್ಯ, ಭ್ರಾತೃತ್ವ, ಮಮತೆ, ತ್ಯಾಗ, ಧರ್ಮ ರಕ್ಷಣೆ, ರಾಜನೀತಿ ಸೇರಿದಂತೆ ಜನಜೀವನಕ್ಕೆ ಅಗತ್ಯವಾದ ಎಲ್ಲ ಮೌಲ್ಯಗಳನ್ನು ಪ್ರತಿಪಾದಿಸಿದ್ದಲ್ಲದೇ ಸಮಗ್ರ ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನವನ್ನು ನೀಡಿದ್ದಾರೆ.

  • ಎಸ್‌.ಎನ್‌.ಚನ್ನಬಸಪ್ಪ, ಶಾಸಕ

RED-LINE-

ರಾಮಾಯಣ ಕೃತಿಗಳಲ್ಲಿ ಬಿಂಬಿತವಾಗಿರುವ ದೇಶದ ಶ್ರೀಮಂತ ಸಂಸ್ಕೃತಿ ಮತ್ತು ಭವ್ಯ ಪರಂಪರೆಯನ್ನು ಯುವ ಜನತೆ ಬದುಕಿನಲ್ಲಿ ಅಳವಡಿಸಿಕೊಂಡು ಅನುಸರಿಸುವ ಅಗತ್ಯವಿದೆ.

  • ಡಿ.ಎಸ್.ಅರುಣ್, ವಿಧಾನ ಪರಿಷತ್ ಸದಸ್ಯ

RED-LINE-

ವಾಲ್ಮೀಕಿ ಅವರ ಆದರ್ಶಗಳನ್ನು ಪ್ರತಿದಿನವು ಪಾಲಿಸಬೇಕು. ಅವರ ಕೃತಿ ಯಲ್ಲಿನ ರಾಮ ಸತ್ಯದ ಪ್ರತೀಕವಾಗಿದ್ದಾನೆ. ಕೃತಿಯನ್ನು ಅನುಸರಿಸಿ, ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು.

  • ಬಲ್ಕಿಸ್‌ ಬಾನು, ವಿಧಾನ ಪರಿಷತ್‌ ಸದಸ್ಯೆ

RED-LINE-

ಇದೇ ವೇಳೆ ವಾಲ್ಮೀಕಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನ ಪುರಸ್ಕರಿಸಲಾಯಿತು.

ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್‌ಗೌಡ, ಸೂಡಾ ಅಧ್ಯಕ್ಷ ಹೆಚ್‌.ಎಸ್‌.ಸುಂದರೇಶ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀನಿವಾಸ್, ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ಸಮಾಜದ ಮುಖಂಡರು ಉಪಸ್ಥಿತರಿದ್ದರು.

071025-Valmiki-circle-board-inaugurated-at-vidyanagra-bridge-in-Shimoga.webp
ಮಹರ್ಷಿ ವಾಲ್ಮೀಕಿ ವೃತ್ತದ ನಾಮಫಲಕ ಅನಾವರಣಗೊಳಿಸಿದ ಶಾಸಕ ಚನ್ನಬಸಪ್ಪ.
valmiki jayanthi in shimoga
ಮಹರ್ಷಿ ವಾಲ್ಮೀಕಿ ಭಾವಚಿತ್ರದೊಂದಿಗೆ ಸಮಾಜದ ಮೆರವಣಿಗೆ
valmiki jayanthi in shimoga
ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಭಾವಚಿತ್ರಕ್ಕೆ ನಮನ.
valmiki jayanthi in shimoga
ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನರು.

ಇದನ್ನೂ ಓದಿ » ‘ಶಿಕಾರಿಪುರ ಬಂದ್‌ಗೆ ಬೆಂಬಲವಿದೆ’, ರಾಘವೇಂದ್ರ ಹೇಳಿಕೆ, ಬಂದ್‌ಗೆ ಕಾರಣವೇನು?

Valmiki Circle

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 8, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment