ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 10 ಡಿಸೆಂಬರ್ 2019
ಭಾರತದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆಗಳು ನಡೆದವು. ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಸಂಘಟನೆಗಳು ಪ್ರತ್ಯೇಕವಾಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದವು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭಾರತದ ಸಂವಿಧಾನದ ಮೇಲೆ ಕೋಮುವಾದದ ಪ್ರಹಾರ ನಡೆಸುವ ಪೌರತ್ವ ತಿದ್ದುಪಡೆ ಮಸೂದೆ ಜಾರಿಗೆ ತರಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ದೇಶದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಈ ಮೂಸೂದೆ ಜಾರಿಗೊಳಿಸಲಾಗುತ್ತಿದೆ. ಇದು ದೇಶವನ್ನು ಒಡೆಯುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯನ್ನು ಎಸ್’ಡಿಪಿಐ ಮತ್ತು ಸಿಎಫ್ಐ ಸಂಘಟನೆಯ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
SDPI and CFI held a protest against amendment of citizenship law. Both Organizations protested in front of DC Office.