ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜುಲೈ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ವಿವಿಧ ಕಾರ್ಮಿಕ ಸಂಘಟನೆಗಳು ಶಿವಮೊಗ್ಗದಲ್ಲಿ ಇವತ್ತು ಪ್ರತಿಭಟನೆ ನಡೆಸಿದವು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಮಿಕರು ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ನೆರವು ನೀಡುವಂತೆ ಒತ್ತಾಯಸಿದರು.
ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ಬಿಸಿ ಊಟ ಕಾರ್ಯಕರ್ತೆಯರು, ಕೆಎಸ್‍ಆರ್‌ಟಿಸಿ ನೌಕರರು ಸೇರಿದಂತೆ ವಿವಿಧ ವಿಭಾಗದ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕಾರ್ಮಿಕರ ಬೇಡಿಕೆಗಳು ಏನು?
ಲಾಕ್‍ಡೌನ್ ಅವಧಿಯಲ್ಲಿ ಕಾರ್ಮಿಕರಿಗೆ ಹಲವು ಕಂಪನಿಗಳು ವೇತನ ಪಾವತಿಸಿಲ್ಲ. ವೇತನ ನೀಡದ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲು ಮಾಡಬೇಕು.
ಕಾರ್ಮಿಕ ಕಾಯ್ದೆಗೆ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಮಾಡಲಾಗಿದೆ. ಇದನ್ನು ಕೂಡಲೆ ಕೈ ಬಿಡಬೇಕು.
ಅಸಂಘಟಿತ ವಲಯದ ಕಾರ್ಮಿಕರಿಗೆ 2202 ಕೋಟಿ ರೂ ಪ್ಯಾಕೇಜ್ ಘೋಷಿಸಲಾಗಿದೆ. ಆದರೆ ಇದು ಮೂರರಿಂದ ಐದು ವಿಭಾಗಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಉಳಿದ 125ಕ್ಕೂ ಹೆಚ್ಚು ವಲಯದ ಕಾರ್ಮಿಕರನ್ನು ನಿರ್ಲಕ್ಷಿಸಲಾಗಿದೆ. ಇದು ಸರಿಯಾದ ಕ್ರಮವಲ್ಲ.
ಕೋವಿಡ್ 19 ವಿರುದ್ದ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿರುವವರಿಗೆ ವಿಮೆ, ಪಿಪಿಇ ಕಿಟ್‍ಗಳು, ಪ್ರೋತ್ಸಾಹ ಧನ, ಉಚಿತ ತಪಾಸಣೆ ಮತ್ತು ಚಿಕಿತ್ಸೆ ಮತ್ತಿತರ ಸೌಲಭ್ಯ ವಿಸ್ತರಿಸಬೇಕು.
ರೈತ ವಿರೋಧಿಯಾಗಿರುವ ಎಂಪಿಎಂಸಿ ಕಾಯ್ದೆ ತಿದ್ದುಪಡಿಯಲ್ಲಿ ಕೂಡಲೆ ಹಿಂಪಡೆಯಬೇಕು.
ಬಿಸಿ ಊಟ ಕಾರ್ಮಿಕರಿಗೆ ಏಪ್ರಿಲ್ ತಿಂಗಳಿಂದ ಶಾಲೆ ಆರಂಭವಾಗುವವರೆಗೆ ವೇತನ ಕೊಡಬೇಕು, ನೌಕರರನ್ನು ಖಾಯಂ ಮಾಡಿ ವಿವಿಧ ಸಲಭ್ಯ ಒದಗಿಸಬೇಕು, ಎಲ್‍ಐಸಿ ಆಧಾರಿತ ಪೆನ್ಷನ್ ನಿಗದಿ ಮಾಡಬೇಕು.
ಕೆಎಸ್‍ಆರ್‌ಟಿಸಿ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ 50 ಲಕ್ಷ ರೂ. ವಿಮೆ ಖಾತ್ರಿ ಕೊಡಬೇಕು. ಆರೋಗ್ಯ ಸುರಕ್ಷತಾ ಉಪಕರಣಗಳು, ಸ್ಯಾನಿಟೈಸರ್, ಮಾಸ್ಕ್ ಒದಗಿಸಬೇಕು. ಕಾರ್ಮಿಕರ ಜೀವದ ರಕ್ಷಣೆಯನ್ನು ಸರ್ಕಾರವೇ ಹೊರಬೇಕು.
ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]