ಶಿವಮೊಗ್ಗ: ಸಿಟಿ ಬಸ್ ಡಿಕ್ಕಿಯಾಗಿ ನವ ವಿವಾಹಿತ ಸಾವನ್ನಪ್ಪಿದ್ದು ಮೂವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೂರು ದ್ವಿಚಕ್ರ ವಾಹನಗಳು ಜಖಂ ಆಗಿವೆ. ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ಇಂದು ರಾತ್ರಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಾಂತಿ ನಗರ ನಿವಾಸಿ ಅಹಮದ್ (31) ಮೃತ ದುರ್ದೈವಿ. ಗಾಯಗೊಂಡಿರುವ ಉಳಿದ ಮೂವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೇಗಾಯ್ತು ಘಟನೆ?
ರಾಗಿಗುಡ್ಡ ಕಡೆಯಿಂದ ಬಂದ ಸಿಟಿ ಬಸ್ ಮಣ್ಣಿನ ದಿಬ್ಬ ಹಾರಿ ಯದ್ವತದ್ವ ಚಲಿಸಿದೆ. ಮೂರು ದ್ವಿಚಕ್ರ ವಾಹನಗಳು, ನಾಲ್ವರು ವ್ಯಕ್ತಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕುಗಳು ನಜ್ಜುಗುಜ್ಜಾಗಿವೆ. ಪೊಲೀಸ್ ಬ್ಯಾರಿಕೇಡ್ ತುಂಡಾಗಿದೆ. ಫುಟ್‌ಪಾತ್‌ಗೆ ಅಳವಡಿಸಿದ್ದ ರೇಲಿಂಗ್ ಕೂಡ ಹಾನಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು
ಇನ್ನು, ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿತ್ತು. ಈ ಪೈಕಿ ಶಾಂತಿನಗರ ನಿವಾಸಿ ಅಹಮದ್ (31) ಗಂಭೀರ ಗಾಯಗೊಂಡಿದ್ದು ಸರ್ಜಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಉಳಿದ ಮೂರಿಗೆ ಸಣ್ಣಪುಟ್ಟ ಗಾಯವಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನಾ ಸ್ಥಳದಲ್ಲಿ ಗುಂಪುಗೂಡಿದ ಜನ
ರಸ್ತೆ ಕಾಮಗಾರಿ ಹಿನ್ನೆಲೆ ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್ ಮೇಲೆ ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸದ್ಯ ಪರ್ಯಾಯ ಮಾರ್ಗದಲ್ಲಿ ಬಸ್ಸುಗಳು ಸಂಚರಿಸುತ್ತಿವೆ. ಮೇಲ್ಸೇತುವೆ ಮುಂಭಾಗ ಮಣ್ಣಿನ ಗುಡ್ಡೆ ಹಾಕಲಾಗಿದೆ. ದ್ವಿಚಕ್ರ ವಾಹನಗಳು ಮಾತ್ರ ಈ ಮಾರ್ಗದಲ್ಲಿ ಸಂಚರಿಸುತ್ತಿವೆ. ಹಾಗಿದ್ದೂ ಸಿಟಿ ಬಸ್ ಈ ಮಾರ್ಗದಲ್ಲಿ ಬಂದು ಅಪಘಾತವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಜನರು ಘಟನಾ ಸ್ಥಳದಲ್ಲಿ ಗುಂಪುಗೂಡಿದ್ದರು. ಕೆಲವು ಬಸ್ಸಿನ ಗಾಜಿಗೆ ಕಲ್ಲು ತೂರಿದ್ದಾರೆ ಎಂದು ತಿಳಿದು ಬಂದಿದೆ.

ಆಸ್ಪತ್ರೆ ಮುಂದೆ ಜಮಾಯಿಸಿದ ಜನ
ಮತ್ತೊಂದೆಡೆ ದುರ್ಗಿಗುಡಿಯಲ್ಲಿರುವ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮುಂಭಾಗದಲ್ಲಿಯು ಜನ ಜಮಾಯಿಸಿದ್ದರು. ಸಿಟಿ ಬಸ್ ಚಾಲಕನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಹಮದ್ ಪಾರ್ಥೀವ ಶರೀರವನ್ನು ಕಂಡು ಕುಟುಂಬದವರು, ಆಪ್ತರು ಕಣ್ಣೀರಾದರು.

ಕೋಟೆ, ಜಯನಗರ ಮತ್ತು ಸಂಚಾರ ಠಾಣೆ ಪೊಲೀಸರು ಸ್ಥಳದಲ್ಲಿ ಇದ್ದರು.


ಇದನ್ನೂ ಓದಿ » ಮೊಬೈಲ್ ಸರ್ವಿಸ್ ಸೆಂಟರ್ ಬೀಗ ಒಡೆದ ಕಳ್ಳರು, ಏನೇನೆಲ್ಲ ಕದ್ದಿದ್ದಾರೆ?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






