ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಜುಲೈ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮಾಲ್‍ಗಳನ್ನು ಓಪನ್ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹಾಗಾಗಿ ಶಿವಮೊಗ್ಗದ ಸಿಟಿ ಸೆಂಟರ್ ಮಾಲ್‍ನಲ್ಲಿ ಕಾರ್ಯ ಚಟುವಟಿಕೆ ಆರಂಭವಾಗಿದೆ. ವ್ಯಾಪಾರ, ವಹಿವಾಟು ಕೂಡ ಶುರುವಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ವಾಹಿವಾಟು ನಡೆಸಲಾಗುತ್ತಿದೆ. ಮಾಲ್‍ನ ಒಳ ಪ್ರವೇಶಿಸುವ ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತಿದೆ. ಸ್ಯಾನಿಟೈಸರ್ ನೀಡಲಾಗುತ್ತಿದೆ. ಅಲ್ಲದೆ ಮಾಲ್‍ನ ಒಳಗೆ ಕಡ್ಡಾಯವಾಗಿ ಮಾಸ್ಕ್ ಬಳಕೆ ಮಾಡುವಂತೆ ನೋಡಿಕೊಳ್ಳಲಾಗುತ್ತಿದೆ.
ಸಿಟಿ ಸೆಂಟರ್ ಮಾಲ್‍ಗೆ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಒಳಗಿರುವ ಕಾಫಿ ಶಾಪ್, ಬಟ್ಟೆ ಅಂಗಡಿಗಳು, ತಿನಿಸು ಮಾರಾಟ ಮಳಿಗಗಳು, ಪಾದರಕ್ಷೆ ಸೇರಿದಂತೆ ಎಲ್ಲಾ ಮಳಿಗೆಗಳಿಗೂ ಸ್ಯಾನಿಟೈಸ್ ಮಾಡಲಾಗಿದೆ. ಗ್ರಾಹಕರು ಅಂಗಡಿಗೆ ಬಂದಾಗ ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗುತ್ತಿದೆ.
ಸರ್ಕಾರದ ನಿರ್ಬಂಧ ಇರುವುದರಿಂದ ಸಿಟಿ ಸೆಂಟರ್ ಮಾಲ್‍ನಲ್ಲಿ ಇರುವ ಭಾರತ್ ಸಿನಿಮಾಸ್ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರ ಬಾಗಿಲು ಬಂದ್ ಆಗಿದೆ. ಹಾಗಾಗಿ ಮಾಲ್‍ನಲ್ಲಿ ಸಿನಿಮಾ ವೀಕ್ಷಣೆಯ ಯೋಚನೆಯೊಂದಿಗೆ ಬರುವವರಿಗೆ ನಿರಾಸೆಯಾಗಲಿದೆ.
ಸಿಟಿ ಸೆಂಟರ್ ಮಾಲ್‍ನಲ್ಲಿ ವ್ಯವಸ್ಥೆ ಕುರಿತ ವಿಡಿಯೋ ಇಲ್ಲಿದೆ
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200