ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜೂನ್ 2020
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಇವತ್ತು ಬೆಳಂಬೆಳಗ್ಗೆ ಶಿವಮೊಗ್ಗ ಸಿಟಿ ರೌಂಡ್ಸ್ ಮಾಡಿದರು. ವಿವಿಧೆಡೆ ಸಂಚರಿಸಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಕೆಲವು ಕಡೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಶಿವಮೊಗ್ಗದ ಸರ್ಕ್ಯುಟ್ ಹೌಸ್ ಮುಂಭಾಗ ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಬಳಿಕ ಬೊಮ್ಮನಕಟ್ಟೆ, ವಿನೋಬನಗರ ರಾಜಾ ಕಾಲುವೆ, ಲಕ್ಷ್ಮೀ ಟಾಕೀಸ್, ರಾಜೇಂದ್ರನಗರ, ಸಿದ್ದೇಶ್ವರ ನಗರ, ಪುರಲೆಯಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಮಿನಿಸ್ಟರ್
ಪರಿಶೀಲನೆ ವೇಳೆ ಕೆಲವು ಕಡೆ ಕಾಮಗಾರಿ ವಿಳಂಬ, ಇನ್ನೂ ಕೆಲವು ಕಡೆ ನಿರ್ಲಕ್ಷ್ಯದ ಕುರಿತು ಸಚಿವ ಬಸವರಾಜು ಅವರು ಅಧಿಕಾರಿಗಳನ್ನು ಪ್ರಶ್ನಿಸಿದರು. ಸಮರ್ಪಕ ಉತ್ತರ ಬಾರದ ಹಿನ್ನೆಲೆ ಗರಂ ಆದರು. ಮುಂದಿನ ಭಾರಿ ಭೇಟಿ ನೀಡುವ ಹೊತ್ತಿಗೆ ಇದು ಸರಿ ಹೋಗಿರಬೇಕು ಎಂದು ಖಡಕ್ ಸೂಚನೆ ನೀಡಿದರು.
ಪೌರ ಕಾರ್ಮಿಕರ ಸಮಸ್ಯೆ ಆಲಿಸಿದರು
ಸಿದ್ದೇಶ್ವರನಗರದಲ್ಲಿ ಕಾಮಗಾರಿಗಳ ಪರಿಶೀಲನೆ ವೇಳೆ ಕೆಲಸ ನಿರ್ವಹಿಸುತ್ತಿದ್ದ ಪೌರ ಕಾರ್ಮಿಕರನ್ನು ಭೇಟಿ ಮಾಡಿದ ಮಿನಿಸ್ಟರ್, ಸಮಸ್ಯೆ ಆಲಿಸಿದರು. ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ ಹಲವು ಕಾರ್ಪೊರೇಟರ್‍ಗಳು ಈ ವೇಳ ಜೊತೆಗಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422