ಶಿವಮೊಗ್ಗ ಲೈವ್.ಕಾಂ | SHIMOGA | 19 ಅಕ್ಟೋಬರ್ 2019
ಹೆಲ್ಮೆಟ್ ಹಾಕದ ದ್ವಿಚಕ್ರ ವಾಹನ ಸವಾರನಿಗೆ ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿಯೊಬ್ಬರು ನಿಂದಿಸಿದ್ದಾರೆ ಎಂದು ಆರೋಪಿಸಿ ತುಂಗಾ ನದಿ ಹಳೆ ಸೇತೆವೆ ಬಳಿ ಸಾರ್ವಜನಿಕರು ದಿಢೀರ್ ರಸ್ತೆ ತಡೆ ನಡೆಸಿದರು.
ಶಿವಮೊಗ್ಗ ನಗರದಾದ್ಯಂತ ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿರುವವರ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇವತ್ತು ಬೆಳಗ್ಗೆ ತುಂಗಾ ನದಿ ಹಳೆ ಸೇತುವೆ ಬಳಿ ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿ ಹಿಡಿದು, ದಂಡ ಕಟ್ಟುವಂತೆ ತಿಳಿಸಿದ್ದಾರೆ.
ಪೊಲೀಸ್ ಸಿಬ್ಬಂದಿ, ದ್ವಿಚಕ್ರ ವಾಹನ ಸವಾರನಿಗೆ ನಿಂದಿಸಿದ್ದಾರೆ ಎಂದು ಆರೋಪಿಸಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು. ಈ ವೇಳೆ ಸಾರ್ವಜನಿಕರ ಜಮಾವಣೆಯಾಯಿತು. ಪೊಲೀಸರು ನಿಂದಿಸಿದ್ದನ್ನು ಖಂಡಿಸಿ ದ್ವಿಚಕ್ರ ವಾಹನ ಸವಾರ ಮತ್ತು ಕೆಲವು ಸಾರ್ವಜನಿಕರು ದಿಢೀರ್ ರಸ್ತೆ ತಡೆ ಮಾಡಿದರು. ಇದರಿಂದ ಬಿ.ಹೆಚ್.ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯವಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200