ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಫೆಬ್ರವರಿ 2022
ಹಿಜಾಬ್, ಕೇಸರಿ ಶಾಲು ಸಂಘರ್ಷದ ಬೆನ್ನಿಗೆ, ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ (ATNCC) ಒಂದು ದಿನ ತರಗತಿ ನಡೆಸದಿರಲು ಆಡಳಿತ ಮಂಡಳಿ ನಿರ್ಧರಿಸಿದೆ.
ಫೆಬ್ರವರಿ 8ರಂದು ತರಗತಿ ನಡೆಯುವುದಿಲ್ಲ. ಆದರೆ ಉಪನ್ಯಾಸಕರು ಮತ್ತು ಸಿಬ್ಬಂದಿ ಕಾಲೇಜಿಗೆ ಬರಲಿದ್ದಾರೆ ಎಂದು ATNC ಕಾಲೇಜು ಪ್ರಾಂಶುಪಾಲರಾದ ಸುರೇಶ್ ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ATNC ಕಾಲೇಜು ವಿದ್ಯಾರ್ಥಿಗಳು ಇವತ್ತು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. ಹಿಜಾಬ್ ಧರಿಸುವ ಸಂಬಂಧ ಮಂಗಳವಾರ ನ್ಯಾಯಾಲಯ ತೀರ್ಪು ನೀಡುವ ಸಾಧ್ಯತೆ ಇದೆ. ಆದ್ದರಿಂದ ಒಂದು ದಿನ ತರಗತಿ ನಡೆಸದಿರಲು ನಿರ್ಧರಿಸಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದ ಮತ್ತೊಂದು ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ, ಬಿಗುವಿನ ವಾತಾವರಣ
ಇದನ್ನೂ ಓದಿ | ‘ಹಿಜಾಬ್, ಕೇಸರಿ ಶಾಲು ಧರಿಸಿ ಬಂದರೆ ಸಹ್ಯಾದ್ರಿ ಕಾಲೇಜಿನಲ್ಲಿ ತರಗತಿಗೆ ಪ್ರವೇಶವಿಲ್ಲ’
Shimoga District Profile | About Shivamogga Live
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422