SHIMOGA | ಅಕ್ರಮ ಗಣಿಗಾರಿಕೆ, ಅಧಿಕಾರಿಗಳೆ ಹೊಣೆ, ಲೈಸೆನ್ಸ್ ಇಲ್ಲದ ಗಣಿಗಳು ತಕ್ಷಣ ನಿಲ್ಲಿಸಲು ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 JANUARY 2021

ರಾಜ್ಯಾದಂತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗಳನ್ನು ತಕ್ಷಣ ನಿಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಅಕ್ರಮ ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲಾಗುವುದು ಎಂದು ಹೇಳಿಲ್ಲ. ಗಣಿಗಾರಿಕೆ ನಡೆಸುತ್ತಿರುವವರು ಪರವಾನಿಗೆಗೆ ಅರ್ಜಿ ಸಲ್ಲಿಸಿದ ಬಳಿಕ, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಯಾರಿಗೂ ಅನಾನುಕೂಲ ಆಗದೇ ಇದ್ದರೆ ಕಾನೂನು ಚೌಕಟ್ಟಿನಲ್ಲಿ ಮಾತ್ರ ಅನುಮತಿ ನೀಡಬಹುದಾಗಿದೆ. ಆದರೆ ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಲಾಗುವುದಿಲ್ಲ ಎಂದರು.

ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಸ್ಟಾಪ್

ರಾಜ್ಯದ ಎಲ್ಲೆಡೆ ಅಕ್ರಮ ಗಣಿಗಾರಿಕೆ ಸಮಸ್ಯೆ ಇದೆ. ಮಂಡ್ಯದ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯಿಂದ ಕೆಆರ್‍ಎಸ್ ಜಲಾಶಯಕ್ಕೆ ಧಕ್ಕೆ ಬರುವ ಅಪಾಯವಿದೆ. ಈಗಾಗಲೇ ಸಂಪೂರ್ಣವಾಗಿ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

ಅಭಿವೃದ್ಧಿ ಕಾರ್ಯಗಳಿಗೆ ಜಲ್ಲಿ ಬೇಕು. ಕಾನೂನು ಚೌಕಟ್ಟಿನಲ್ಲಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಸಾಂಪ್ರದಾಯಿಕವಾಗಿ ಕಲ್ಲುಗಳನ್ನು ಒಡೆದು ಜಲ್ಲಿ ಮಾಡುವವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಭಿವೃದ್ಧಿ ಕಾಮಗಾರಿಗಳಿಗೆ ಜಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅಕ್ರಮ ಗಣಿಗಾರಿಕೆ ನಡೆದರೆ ಸಂಬಂಧಪಟ್ಟ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಸಿದರು.

ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ

ಎಫ್‍ಡಿಎ ಪರೀಕ್ಷೆ ಪತ್ರಿಕೆ ಸೋರಿಕೆ ಕುರಿತು ಮಾಹಿತಿಯನ್ನು ಪಡೆದಿದ್ದೇನೆ. ಈ ಕುರಿತು ಸಮಗ್ರ ತನಿಖೆ ನಡೆಸಲಾಗುವುದು. ಪರೀಕ್ಷಾ ಅಕ್ರಮಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಇದೊಂದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯಬಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಲಾಗುವುದು.

ಜವರಿ 26ರಂದು ರೈತರು ಶಾಂತರೀತಿಯಲ್ಲಿ ಪ್ರತಿಭಟಿಸಲು ಅವಕಾಶವಿದೆ. ನಮ್ಮ ಸರ್ಕಾರ ರೈತಪರವಾಗಿದೆ ಎಂದು ತಿಳಿಸಿದರು.

ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

VIDEO REPORT


ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment