ಶಿವಮೊಗ್ಗ ಲೈವ್.ಕಾಂ | SHIMOGA | 24 ಫೆಬ್ರವರಿ 2020
ಸಾಗರ ರಸ್ತೆಯ ಕೈಗಾರಿಕಾ ವಲಯ, ಆಟೋ ಕಾಂಪ್ಲೆಕ್ಸ್ ಹಾಗೂ ಕಲ್ಲೂರು-ಮಂಡ್ಲಿ ಕೈಗಾರಿಕಾ ವಲಯ ಅಭಿವೃದ್ದಿಗೆ 40 ಕೋಟಿ ರೂ. ಮಂಜೂರಾತಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಸಭೆ ನಡೆಸಿದ ಅವರು,ಮೂರೂ ಕೈಗಾರಿಕಾ ವಲಯಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಂಡು ರಸ್ತೆ, ಚರಂಡಿ ಸೇರಿ ವಿವಿಧ ಅಭಿವೃದ್ಧಿಗೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.
ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಕೈಗಾರಿಕಾ ವಲಯಗಳಲ್ಲಿ ಮೂಲಸೌಕರ್ಯ ಕಲ್ಪಿಸಬೇಕಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ, 40 ಕೋಟಿ ರೂ. ಅನುದಾನ ಬಿಡುಗಡೆಗೊಳಿಸುವುದಾಗಿ ತಿಳಿಸಿದರು ಎನ್ನಲಾಗಿದೆ.
ಸ್ಮಾರ್ಟ್ಸಿಟಿ ಕಾಮಗಾರಿ ಕುರಿತು ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಅವರಿಂದ ಮಾಹಿತಿ ಪಡೆದ ಸಿಎಂ ತ್ವರಿತವಾಗಿ ಕಾಮಗಾರಿ ಮುಗಿಸಬೇಕು. ಜತೆಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಆರ್ಯವೈಶ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ದತ್ತಾತ್ರಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಡಿಸಿ ಕೆ.ಬಿ.ಶಿವಕುಮಾರ್, ಜಿಪಂ ಸಿಇಒ ಎಂ.ಎಲ್.ವೈಶಾಲಿ ಮತ್ತಿತರರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]