ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ಕುರಿತು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿ ಬೊಮ್ಮಾಯಿ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

SHIVAMOGGA LIVE NEWS | 8 FEBRURARY 2023

SHIMOGA : ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಕಳುಹಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

Shimoga-Airport-General-Image

ಎನ್ಇಎಸ್ ಮೈದಾನದಲ್ಲಿ ಶಿವಮೊಗ್ಗ ನಗರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಘೋಷಣೆ ಮಾಡಿದರು.

ಯಡಿಯೂರಪ್ಪ ಅವರ ಶ್ರಮ, ಶತಾಯಗತಾಯ ಪ್ರಯತ್ನದಿಂದಾಗಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. 18 ತಿಂಗಳಲ್ಲಿ ವಿಮಾನ ನಿಲ್ದಾಣ ಸಿದ್ಧವಾಗಿರುವುದು ದಾಖಲೆ. ಇದಕ್ಕೆ ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ರಾಜ್ಯ ಸರ್ಕಾರ ಶಿಫಾರಸು ಮಾಡಲಿದೆ. ಆದರೆ ತಮ್ಮ ಹೆಸರು ಇಡುವುದಕ್ಕೆ ಬೇಡ ಎಂದು ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ ಎಂದರು.

ಕೆಲಸ ಮಾಡಿದ ನಾಯಕರು ಕೆಲವೊಮ್ಮೆ ತಮ್ಮ ಹೆಸರು ನಾಮಕರಣಕ್ಕೆ ನಿರಾಕರಿಸುತ್ತಾರೆ. ಆದರೆ ಅಭಿಮಾನಿಗಳ ಒತ್ತಾಯ, ಅವರನ್ನು ಪ್ರೀತಿಯಿಂದ ಕಾಣುವ ಜನರ ಒತ್ತಾಸೆಗೆ ಕೆಲವೊಮ್ಮೆ ನಾಯಕರು ಮಣಿಯಬೇಕಾಗುತ್ತದೆ. ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ. ಆ ದಿನ 3 ಲಕ್ಷ ಜನ ಸೇರಲಿದ್ದಾರೆ. ಆಗ ಪ್ರಧಾನಿ ನರೇಂದ್ರ ಮೋದಿ ಅವರೆ ವಿಮಾನ ನಿಲ್ದಾಣದ ಹೆಸರು ಪ್ರಕಟಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಕೆಲಸದ ಹೆಸರಲ್ಲಿ ಮಹಾ ಮೋಸ, ದಾಖಲಾಯಿತು ಮೊದಲ ಕೇಸ್

Leave a Comment